FLASH NEWS : ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ರೈತರಿಗೆ ಸಿಎಂ ಸಿದ್ದರಾಮಯ್ಯ “ಯುಗಾದಿ” ಗಿಫ್ಟ್..!!
ಪ್ರಜಾ ವೀಕ್ಷಣೆ ಸುದ್ದಿ ಡೆಸ್ಕ್ : ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿಬರೆದುಕೊಂಡಿರುವ ಸಿಎಂ ಸಿದ್ದು, ‘ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.’
https://x.com/siddaramaiah/status/1906313912410386702