BIG BREAKING : ಕಾಂಗ್ರೆಸ್‌ ಶಾಸಕನ ಆಪ್ತನಿಂದ ಎಫ್‌ಐಆರ್‌ ದಾಖಲು : ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..!!

You are currently viewing BIG BREAKING : ಕಾಂಗ್ರೆಸ್‌ ಶಾಸಕನ ಆಪ್ತನಿಂದ ಎಫ್‌ಐಆರ್‌ ದಾಖಲು : ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..!!

BIG BREAKING : ಕಾಂಗ್ರೆಸ್‌ ಶಾಸಕನ ಆಪ್ತನಿಂದ ಎಫ್‌ಐಆರ್‌ ದಾಖಲು : ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..!!

ಬೆಂಗಳೂರು : ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ನಡೆದಿದೆ.

ಯುವಕನೊಬ್ಬ ಎಫ್​​ಐಆರ್​ ದಾಖಲಿಸಿದ್ದಕ್ಕೆ ಮನನೊಂದು ವಿನಯ್ ಸೋಮಯ್ಯ(35) ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್ಐಆರ್‌ನಿಂದ ಮನನೊಂದಿದ್ದೇನೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದನು. ಇದೀಗ ವಿನಯ್ ಸೋಮಯ್ಯ ಆತ್ಮಹತ್ಯೆ ಹಿಂದೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

ಮೃತ ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ ಬಗ್ಗೆ ಅಪಹಾಸ್ಯ ಪೋಸ್ಟ್ ಮಾಡಿರುವ ಆರೋಪ ಕೇಳಿ ಬಂದಿತ್ತು.ಹೀಗಾಗಿ ಕಾಂಗ್ರೆಸ್ ಮುಖಂಡ ಓರ್ವ ನೀಡಿದ ದೂರು ಆಧರಿಸಿ ವಿನಯ್ ವಿರುದ್ಧ ಮಡಿಕೇರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

ನಂತರ ವಿನಯ್ ನಿರೀಕ್ಷಣಾ ಜಾಮೀನು ಕೂಡ ಪಡೆದಿದ್ದರು. ಬಳಿಕ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ನಿನ್ನೆ ರಾತ್ರಿ ಸ್ವತಃ ಮೃತ ವಿನಯ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಡೆತ್​​ನೋಟ್​ನಲ್ಲಿ ಸತ್ಯ ಬಹಿರಂಗ..!!

“ನನ್ನ ಆತ್ಮಹತ್ಯೆಗೆ ವಿರಾಜಪೇಟೆ ಶಾಸಕ ಪೊನ್ನಣ್ಣ ಆಪ್ತ ತೆನ್ನೀರಾ ಮಹೀನಾ ಕಾರಣ” ಎಂದು ವಿನಯ್​ ಡೆತ್​​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ್ದಾರೆ. ನನ್ನ ಮೇಲೆ ಎಫ್​ಐಆರ್ ದಾಖಲಿಸಿ ಕಿಡಿಗೇಡಿ ಎಂದು ಕೊಡಗು ಜಿಲ್ಲೆಯಲ್ಲಿ ನನ್ನ ಬಗ್ಗೆ ತೆನ್ನೀರಾ ಅಪಪ್ರಚಾರ ಮಾಡಿದ್ದಾನೆ. ತೆನ್ನೀರಾ ಈ ಹಿಂದೆಯೂ ಹಲವರ ಆತ್ಮಹತ್ಯೆಗೆ ಕಾರಣವಾಗಿದ್ದಾನೆ” ಎಂದು ಹೇಳಿದ್ದಾನೆ.

Leave a Reply

error: Content is protected !!