BREAKING : ದ್ವಿತೀಯ ಪಿಯುಸಿ ಫಲಿತಾಂಶ : ಇಲ್ಲಿದೆ ಮಾಹಿತಿ..!!
ಪ್ರಜಾವೀಕ್ಷಣೆ ಡಿಜಿಟಲ್ ಡೆಸ್ಕ್ : ಕಳೆದ ಒಂದು ತಿಂಗಳ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು, ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಪರೀಕ್ಷೆಯನ್ನು ಬರೆದಿದ್ದ ಲಕ್ಷ ಲಕ್ಷ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಓದಲು ಹೋಗುವುದಕ್ಕೆ ಕಾದು ಕುಳಿತಿದ್ದರು. ಹೀಗಿರುವಾಗಲೇ, ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಕೌಂಟ್‌ಡೌನ್ ಶುರುವಾಗಿದೆ.
ಈ ಪರೀಕ್ಷೆಯನ್ನು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದು, ಫಲಿತಾಂಶ ಪಡೆಯಲು ಕಾಯುತ್ತಾ ಕುಳಿತಿದ್ದಾರೆ. 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ ಮಾರ್ಚ್ 20 ರವರೆಗೂ ನಡೆದಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನವು ತಕ್ಷಣವೇ ಶುರುವಾಗಿತ್ತು. ರಾಜ್ಯದಲ್ಲಿ 1,171 ಕೇಂದ್ರಗಳಲ್ಲಿ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯ ಬರೆದಿದ್ದರು. ಮಾರ್ಚ್ ತಿಂಗಳಲ್ಲೇ ಮೌಲ್ಯಮಾಪನ ಪ್ರಕ್ರಿಯೆ ಕೂಡ ಆರಂಭ ಆಗಿತ್ತು. ಇದೀಗ ಫಲಿತಾಂಶ ಹೊರಗೆ ಬೀಳಲಿದ್ದು, ಇದಕ್ಕಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ?
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರಿಸಲ್ಟ್ ಅಂದ್ರೆ 2nd PUC ರಿಸಲ್ಟ್ ಏಪ್ರಿಲ್ 11ರ ಒಳಗಾಗಿ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರೆದಾಡುತ್ತಿದೆ.