ಪಿಯು ಫಲಿತಾಂಶ : ವಿದ್ಯಾರ್ಥಿಗಳಿಗೆ ಡಿ.ಸಿ. ಸನ್ಮಾನ.

You are currently viewing ಪಿಯು ಫಲಿತಾಂಶ : ವಿದ್ಯಾರ್ಥಿಗಳಿಗೆ ಡಿ.ಸಿ. ಸನ್ಮಾನ.

LOCAL NEWS : ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಪ್ಪಳ ಜಿಲ್ಲೆಗೆ 2 & 3ನೇ ಸ್ಥಾನ ಪಡೆದ ರೈತರ ಮಕ್ಕಳು..!

ಡಿ.ದೇವರಾಜ ಅರಸು ಮೆಟ್ರಿಕ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಕೊಪ್ಪಳ : ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ 2 & 3ನೇ ಸ್ಥಾನ ಪಡೆದಕೊಂಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ‌ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಮ್ಮ ಕಛೇರಿಯಲ್ಲಿ ಬುಧವಾರ ಸನ್ಮಾನಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕುಷ್ಟಗಿ ತಾಲೂಕಿನ ತಾವರಗೇರಾ ಡಿ.ದೇವರಾಜ ಅರಸು ಮೆಟ್ರಿಕ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿ ಮರಿದೇವಿ 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗದಲ್ಲಿ 600 ಕ್ಕೆ 577 (ಶೇ.96.17) ಅಂಕ ಪಡೆಯುವ ಮೂಲಕ ಕೊಪ್ಪಳ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾಳೆ ಮತ್ತು ಕುಕನೂರಿನ ಡಿ.ದೇವರಾಜ ಅರಸು ಮೆಟ್ರಿಕ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿ ದೀಪಾ ಕಲಾ ವಿಭಾಗದಲ್ಲಿ 600 ಕ್ಕೆ 576 (ಶೇ.96) ಅಂಕ ಪಡೆಯುವ ಮೂಲಕ ಜಿಲ್ಲೆಗೆ ತೃತೀಯ ಸ್ಥಾನ ಪಡೆದು ಕೊಂಡಿದ್ದಾರೆ.

ಈ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದಿಂದ ಬಂದಿದ್ದು, ಇವರ ಪಾಲಕರು ಕೃಷಿ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿನಿಯರ ಮುಂದಿನ ಜೀವನ ಉಜ್ವಲವಾಗಲಿ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶುಭ ಹಾರೈಸಿ ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗಮಣಿ, ಯಲಬುರ್ಗಾ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಶಂಕರ ಕರಡಕಲ್, ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಬಸವರಾಜ ನೆಲಾಗಣಿ, ವಸತಿ ನಿಲಯ ಮೇಲ್ವಿಚಾರಕರು ಸೇರಿದಂತೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!