ಅದ್ದೂರಿ ಭಗವಾನ್ ಮಹಾವೀರ ಜಯಂತಿ ಆಚರಣೆ
ಕೊಪ್ಪಳ : ಅಹಿಂಸಾ ತತ್ವಗಳ ಪ್ರತಿಪಾದಕ ಭಗವಾನ್ ಮಹಾವೀರ ಜಯಂತಿಯ ಅಂಗವಾಗಿ ಕೊಪ್ಪಳದಲ್ಲಿ ಗುರುವಾರ ಮಹಾವೀರರ ಭಾವಚಿತ್ರದ ಭವ್ಯ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಸಹಯೋಗದಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗಿದ್ದು, ಮೆರವಣಿಗೆಗೆ ನಗರದ ಅಶೋಕ್ ವೃತ್ತದಲ್ಲಿ ಚಾಲನೆ ನೀಡಲಾಯಿತು. ಈ ವೇಳೆ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತಾ, ತಹಶಿಲ್ದಾರರ ವಿಠ್ಠಲ ಚೌಗಲಾ, ಇತರೆ ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.