BIG BREAKING : ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ಕೋರ್ಟ್ ಶಾಕ್ : ಬರೋಬ್ಬರಿ 7ವರ್ಷ ಜೈಲು ಶಿಕ್ಷೆ..!!

You are currently viewing BIG BREAKING : ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ಕೋರ್ಟ್ ಶಾಕ್ : ಬರೋಬ್ಬರಿ 7ವರ್ಷ ಜೈಲು ಶಿಕ್ಷೆ..!!

PV News:

BIG BREAKING : ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ಕೋರ್ಟ್ ಶಾಕ್ : ಬರೋಬ್ಬರಿ 7ವರ್ಷ ಜೈಲು ಶಿಕ್ಷೆ..!!

ಬೆಂಗಳೂರು : ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ಕೋರ್ಟ್ ಶಾಕ್ ನೀಡಿದೆ. ಹೊಸ ಪಕ್ಷ “ಕಲ್ಯಾಣ ರಾಜ್ಯ ಪ್ರಗತಿ” ಪಕ್ಷ ಸ್ಥಾಪಿಸಿ ಗೆದ್ದು ಬೀಗಿದ್ದ ಶಾಸಕ ಜನಾರ್ಧನ್ ರೆಡ್ಡಿ  ಇತ್ತೀಚಿಗೆ ಬಿಜೆಪಿ ಸೇರ್ಪಡೆಯಾಗಿದ್ದರು.

ಇದೀಗ ಅವರಿಗೆ ಪ್ರಕರಣವೊಂದರಲ್ಲಿ ಸಿಬಿಐ ಕೋರ್ಟ್ ಜೈಲು ಶಿಕ್ಷೆ ಪ್ರಕಟಿಸಿದೆ. ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲವನ್ನು ಸೃಷ್ಟಿ ಮಾಡಿದ್ದ ಗಾಲಿ ಜನಾರ್ದನ ರೆಡ್ಡಿ ಈ ಹಿಂದೆ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣವು ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದದಿದೆ. ಈ ಪ್ರಕರಣದಲ್ಲಿ ಇದೀಗ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬರೋಬ್ಬರಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಸಿಬಿಐ ವಿಶೇಷ ನ್ಯಾಯಲಯ ಆದೇಶ ಮಾಡಿದೆ.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 13 ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆದಿದ್ದು, ಅಂತಿಮವಾಗಿ ನಿನ್ನೆ (ಮೇ 6ರಂದು) ಈ ಕೇಸ್‌ಗೆ ಸಂಬಂಧಿಸಿದಂತೆ 7 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.

ಕರ್ನಾಟಕದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇದ್ದ ಸಂದರ್ಭದಲ್ಲಿ ಭಾರೀ ಅಕ್ರಮ ಅದಿರು ಗಣಿಗಾರಿಕೆ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದೇ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರಿಗೆ ಜೈಲು ಶಿಕ್ಷೆ ಸಹ ವಿಧಿಸಲಾಗಿತ್ತು. ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರ ಹೆಸರು ಹಾಗೂ ಆಂಧ್ರ ಪ್ರದೇಶದ ಪ್ರಭಾವಿಗಳ ಹೆಸರು ಸಹ ಕೇಳಿ ಬಂದ ಮೇಲೆ ಬಿಜೆಪಿಯು ಕೇಂದ್ರ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗಿತ್ತು. ಜೈಲು ಶಿಕ್ಷೆ ಹಾಗೂ ಜಡ್ಡೆಗೆ ಆಮಿಷದಂತಹ ಗಂಭೀರ ಆರೋಪ ಕೇಳಿ ಬಂದ ಮೇಲೆ ಜನಾರ್ದನ ರೆಡ್ಡಿ ಅವರಿಂದ ಬಿಜೆಪಿ ಅಂತರ ಕಾಪಾಡಿಕೊಂಡಿತ್ತು.

ಇದೇ ವರ್ಷ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸ ಪಕ್ಷವನ್ನು ಸ್ಥಾಪನೆ ಮಾಡಿದ್ದ ಅವರು ಶಾಸಕರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಶಾಸಕರಾಗಿ ಆಯ್ಕೆಯಾದ ಕೆಲವೇ ತಿಂಗಳುಗಳಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಸಿಬಿಐ ಕೋರ್ಟ್ ಗಾಲಿ ಜನಾರ್ಧನ ರೆಡ್ಡಿ ಗೆ ದೊಡ್ಡ ಶಾಕ್ ನೀಡಿದೆ.

Leave a Reply

error: Content is protected !!