BREAKING : ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ಕೇಳಿದ್ದೇನೆ : ಸಿಎಂ ಸಿದ್ದರಾಮಯ್ಯ
ಕೊಪ್ಪಳ : ‘ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಈ ಬಗ್ಗೆ ಕೊಪ್ಪಳದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಕೊಪ್ಪಳದ ಗ್ರಾಮೀಣ ಭಾಗದಲ್ಲಿ ಬಲ್ಡೋಟ ಉಕ್ಕು ಕಾರ್ಖಾನೆಯ ಹೇಚ್ಚುವರಿ ವಿಸ್ತರಣೆ ಮಾಡುತ್ತಿರುವುದರ ಕುರಿತು ಈಗಾಗಲೇ ಈ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ನಂತರ ಸಾಧಕ-ಬಾಧಕಗಳನ್ನು ನೋಡಿಕೊಂಡು ತೀರ್ಮಾನ ತಗೆದುಕೊಳ್ಳಲಾಗುವುದು’ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಹೆಚ್ ಕೆ ಪಾಟೀಲ್, ಶಿವರಾಜ್ ತಂಗಡಗಿ, ಭೋಸ್‌ರಾಜ್, ಜಮೀರ್ ಅಹ್ಮದ್, ಶಾಸಕ ರಾಘವೇಂದ್ರ ಹಿಟ್ಟಾಳ್, ಕಂಪ್ಲಿ ಶಾಸಕ ಗಣೇಶ ಇದ್ದರು.