GOOD NEWS: ರಾಜ್ಯದ ಮಹಿಳೆಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಮತ್ತೊಂದು ಸಿಹಿ ಸುದ್ದಿ..!!

You are currently viewing GOOD NEWS: ರಾಜ್ಯದ ಮಹಿಳೆಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಮತ್ತೊಂದು ಸಿಹಿ ಸುದ್ದಿ..!!

ಪ್ರಜಾವೀಕ್ಷಣೆ ಡಿಜಿಟಲ್‌ ಡೆಸ್ಕ್‌ :

GOOD NEWS: ರಾಜ್ಯದ ಮಹಿಳೆಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಮತ್ತೊಂದು ಸಿಹಿ ಸುದ್ದಿ..!!

ಬೆಂಗಳೂರು : ಮನೆಯ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ / ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ‘ಗೃಹಲಕ್ಷ್ಮಿ’ ಸಂಘವನ್ನು ರಚಿಸಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.25 ಕೋಟಿ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಸಂದಾಯ ಆಗುತ್ತಿರುವ 2 ಸಾವಿರ ರೂಪಾಯಿ ಹಣವನ್ನು ಇನ್ನಷ್ಟು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಇದೀಗ ಗೃಹಲಕ್ಷ್ಮಿ ಸಂಘಗಳನ್ನು ರಚಿಸಲಾಗುವುದು. ಈ ಮೂಲಕ ಗೃಹಲಕ್ಷ್ಮಿ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವುದೇ ಉದ್ದೇಶವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

Leave a Reply

error: Content is protected !!