ಮುದಗಲ್ಲ ವರದಿ…
ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ವ್ಯಾಪಾರಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು :ಮುಜಾಹಿದ್ ಪಾಶ..
ಮುದಗಲ್ಲ :- ಮುದಗಲ್ಲ ನ ಮೌಲಾಲಿ ದಗ೯ದ ಮುಂಭಾಗ ದ ಆವರಣದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಭೆ ನಡೆಯಿತು ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಮುಜಾಹಿದ್ ಪಾಶ ಅವರು ಆಯ್ಕೆ ಮಾಡಲಾಯಿತು ಆಯ್ಕೆ ಯಾದ ಮುಜಾಹಿದ್ ಪಾಶ ಅವರು ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ವ್ಯಾಪಾರಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
‘ರಾಜ್ಯ ಸರ್ಕಾರ ವಿಶೇಷವಾಗಿ ಡೇ-ನಲ್ಮ್ ಯೋಜನೆಯಡಿ ಬೀದಿ ಬದಿ ಹಾಗೂ ತಳ್ಳುಗಾಡಿ ವ್ಯಾಪಾರಿಗಳಿಗೆ ಅನೇಕ ಸೌಕರ್ಯಗಳನ್ನು ಮಾಡಿಕೊಡುತ್ತಿದೆ. ಈ ದಿಕ್ಕಿನಲ್ಲಿ ಸಣ್ಣ ವ್ಯಾಪಾರಸ್ಥರು ಜಾಗೃತರಾಗಿ ಸರ್ಕಾರದ ಯೋಜನೆಗಳನ್ನು ಉಪಯೋಗ ಮಾಡಿಕೊಂಡು ತಮ್ಮ ಬದುಕನ್ನು ಹಸನು ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು
ಇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಅಭಿಬ್ ರಾಜಸಬ ಅವರು ಈ ಸಂದರ್ಭದಲ್ಲಿ ಮಾತನಾಡಿದರು ಬೀದಿಬದಿಯ ವ್ಯಾಪಾರಿಗಳು ಎಂಬ ಗುರುತಿನ ಚೀಟಿಯನ್ನು ಪಡೆಯಲು ಸಲಹೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೀದಿಬದಿ ವ್ಯಾಪಾರಿಗಳಿಗೆ ತಮ್ಮ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ಸಹಾಯ ಒದಗಿಸಲು ಪ್ರಧಾನಮಂತ್ರಿ ಬೀದಿ ಬದಿ ಆತ್ಮನಿರ್ಭರ್ ಯೋಜನೆಯನ್ನು ಜಾರಿಗೆ ತಂದಿದ್ದು ಅರ್ಹ ಫಲಾನುಭವಿಗಳು ಇದರ ಉಪಯೋಗ ಪಡೆಯುವಂತೆ ಸೂಚಿಸಿದರು
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮುಜಾಹಿದ್ ಪಾಶ ,
ಗೌರವ ಅಧ್ಯಕ್ಷ ರಾದ ರಾಜ ನಾಯಕ್ ,ಉಪಾಧ್ಯಕ್ಷ ರಾದ ಶಾಮೀದ್ ಪಾಶ, ವರದಿಗಾರ ವಾಹೀದ್ ಖುರೇಷಿ , ಕಾರ್ಯದರ್ಶಿಯಾದ ಯುಶುಭ್ ಶಾ, ಖಜಾಂಚಿಯಾದ ಬುಡಪ್ಪ, ಇತರರು ಉಪಸ್ಥಿತರಿದ್ದರು.
ವರದಿ:- ಮಂಜುನಾಥ ಕುಂಬಾರ