You are currently viewing BREAKING : 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ತೀರ್ಮಾನ!

BREAKING : 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ತೀರ್ಮಾನ!

ಪ್ರಜಾವೀಕ್ಷಣೆ ಸುದ್ದಿ: 

BREAKING : 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ತೀರ್ಮಾನ!

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ ಕಾರಣ ನೀಡಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇದೀಗ ಇಂದು ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸಭಾಧ್ಯಕ್ಷ ಯು.ಟಿ ಖಾದರ್ ತೀರ್ಮಾನ ಕೈಗೊಂಡಿದ್ದಾರೆ.

ಇಂದು ವಿಧಾನಸೌಧದ ಸಭಾಧ್ಯಕ್ಷರ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಭಾಧ್ಯಕ್ಷ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು.

ಇಂದಿನ ಸಂಧಾನ ಸಭೆಯಲ್ಲಿ ಅಮಾನತುಗೊಂಡಿದ್ದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಿಂಪಡೆಯಲು ಸ್ಪೀಕರ್ ಅವರು ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ 18 ಶಾಸಕರ ಅಮಾನತನ್ನು ಹಿಂಪಡೆಯುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!