ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಬಿಜೆಪಿಯಿಂದ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಇದೀಗ ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯಿಂದ ಮಾಹಿತಿ ಹೊರಬಿದ್ದಿದೆ. ಇದಕ್ಕೂ ಮುಂಚಿತವಾಗಿ ಮಾತನಾಡಿದ ಧರ್ಮೇಂದ್ರ ಪ್ರಧಾನ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡುವ ನಿಟ್ಟಿನಲ್ಲಿ ಸರ್ವೆ ಮಾಡಲಾಗುವುದು ಅಂತ ತಿಳಿಸಿದರು. ಕರ್ನಾಟಕದ 189 ವಿಧಾನಸಭಾ ಕ್ಷೇತ್ರಗಳನ್ನು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಆ ಪಟ್ಟಿಯಲ್ಲಿ 52 ಜನರನ್ನು ಹೊಸಮುಖ ತರಲಿದ್ದಾರೆ.
ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಅರುಣ್ ಸಿಂಗ್ ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಯಲ್ಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಹಾಲಪ್ಪ ಆಚಾರ್ ಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಅದೇ ರೀತಿ ಕುಷ್ಟಗಿ ಕ್ಷೇತ್ರಕ್ಕೆ ದೊಡ್ಡನಗೌಡ ಪಾಟೀಲ್, ಕನಕಗಿರಿ ಕ್ಷೇತ್ರಕ್ಕೆ ಬಸವರಾಜ್ ದಡೆಸೂಗುರು ಗೆ ಟಿಕೆಟ್ ನೀಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿರುತ್ತಾರೆ. ಅವರೇ ಜಿಲ್ಲೆಯ ಹೈ ವೋಲ್ಟೇಜ್ ಆದ ಕೊಪ್ಪಳ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬುದು ಇನ್ನು ಬಹಿರಂಗಿಸಿಲ್ಲ ಜೊತೆಗೆ ಗಂಗಾವತಿ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ.
ಈ ವೇಳೆ ಮಾಧ್ಯಮಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವೀಯ, ರಾಜ್ಯ ಬಿಜೆಪಿ ಸಹ ಚುನಾವಣಾ ಉಸ್ತುವಾರಿ ಕೆ.ಅಣ್ಣಾ ಮಲೈ, ಕೇಂದ್ರ ಗಣಿ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು.