BREAKING : ಇಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” : ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಖಡಕ ಸೂಚನೆ..!!

You are currently viewing BREAKING : ಇಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” : ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಖಡಕ ಸೂಚನೆ..!!

ಪ್ರಜಾವೀಕ್ಷಣೆ ಡಿಜಿಟಲ್‌ ಡೆಸ್ಕ್‌ :

BREAKING : ಇಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” : ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಖಡಕ ಸೂಚನೆ..!!

ಬೆಂಗಳೂರು : ಇಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” ಈ ದಿನವನ್ನು ವಿಶ್ವಾದ್ಯಾಂತ ಆಚರಣೆ ಮಾಡಲಾಗುತ್ತಿದೆ. ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು (ILO) 2002 ರಲ್ಲಿ ಜೂನ್-12ನೇ ದಿನವನ್ನು”ವಿಶ್ವ ಬಾಲಕಾರ್ಮಿಕ ವಿರೋಧಿ ದಿನ”ವನ್ನು ಘೋಷಣೆ ಮಾಡಿದೆ.

ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” ಆಚಾರಿಸಲಾಗುತ್ತಿದೆ.

ಈ ಕುರಿತು ಇಂದು ರಾಜ್ಯಾದ್ಯಂತ ಸರ್ಕಾರದ ಎಲ್ಲಾ ಇಲಾಖೆ, ನಿಗಮ, ಮಂಡಳಿ, ಪ್ರಾಧಿಕಾರ, ಸಂಸ್ಥೆ, ನಿರ್ದೇಶನಾಲಯ ಶಾಲಾ-ಕಾಲೇಜು, ಕಛೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರುಗಳಿಗೆ ಜೂನ್ 12 ರಂದು “ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆಯನ್ನು ಬಯಸುವುದಿಲ್ಲವೆಂಬ ಪ್ರಮಾಣ ವಚನ’ವನ್ನು ಬೋಧಿಸಲು ರಾಜ್ಯದ ಎಲ್ಲಾ ಇಲಾಖೆಯ ಮುಖ್ಯಸ್ಥರುಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಖಡಕ್ಕಾಗಿ ಸೂಚನೆ ನೀಡಿದ್ದಾರೆ.

Leave a Reply

error: Content is protected !!