ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಈ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಜೂನ್ 1 ರಿಂದ 2023-24ನೇ ಸಾಲಿನ ಪ್ರಥಮ & ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಜೂನ್ 22 ರಿಂದ ದ್ವಿತೀಯ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದೆ. ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ಬಳಿಕವೇ ತಿಳಿಸಲಾಗುವುದು. ಮೊದಲ ಕಾರ್ಯನಿರತ ದಿನದಿಂದ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದೆ.
ಪಿಯುಸಿ ತರಗತಿಗಳಿಗೆ ದಿನಾಂಕ ಅಕ್ಬೋಬರ್ 14 ರಿಂದ 29 ರವರೆಗೆ ಮಧ್ಯಂತರ ರಜೆ ಘೋಷಣೆ ಮಾಡಲಾಗಿದ್ದು, ಮಾರ್ಚ್ 31 ರಿಂದ ಬೇಸಿಗೆ ರಜೆ ಪ್ರಾರಂಭವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.