BREAKING : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ : ಶಾಲೆಗಳಿಗೆ ರಜೆ ಘೋಷಣೆ…!
ಪ್ರಜಾವೀಕ್ಷಣೆ ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ಮುಂಗಾರುಮಳೆ ಅರ್ಭಟಿಸುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇಂದು ಈ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಕಾರಣ ಮನೆಯಿಂದ ಹೊರಗೆ ಬರದಂತ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮಗೊಳ್ಳಲು ಆದೇಶ ಮಾಡಿದ್ದಾರೆ.