ಪ್ರಜಾ ವೀಕ್ಷಣೆ ಸುದ್ದಿ :

BIG NEWS : ಇಂದು ಶಿರೂರು ಗ್ರಾಮದಲ್ಲಿ ಮಾಜಿ ಮಂತ್ರಿ ದಿ. ಕೆ.ಎಚ್. ಪಾಟೀಲ್ ರವರ ಮೂರ್ತಿ ಅನಾವರಣ : ಸಂಪುಟ ಸಚಿವರು ಭಾಗಿ..!!

ಕೊಪ್ಪಳ : ಜಲ ಸಂಪನ್ಮೂಲ ಇಲಾಖೆಯ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಮಾಜಿ ಮಂತ್ರಿಗಳಾದ ದಿ. ಕೆ.ಎಚ್. ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮವನ್ನು ಇಂದು (ಜೂನ್ 22ರ ರವಿವಾರ) ಬೆಳಿಗ್ಗೆ 11 ಗಂಟೆಗೆ ಕುಕನೂರು ತಾಲ್ಲೂಕಿನ ಶಿರೂರು ಪುನರ್‌ವಸತಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ ಮತ್ತು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ನೂತನ ಮೂರ್ತಿ ಅನಾವರಣ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಸರ್ಕಾರದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ, ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹಾಗೂ ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ದೊಡ್ಡನಗೌಡ ಹನುಮನಗೌಡ ಪಾಟೀಲ್ ಅವರು ಘನ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರು ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ವಿ. ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ್ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆಯ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್, ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕೃಷ್ಣಮೂರ್ತಿ ಬಿ. ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಮಾಜಿ ಜಿ.ಪಂ. ಉಪಾಧ್ಯಕ್ಷರಾದ ಯಂಕಣ್ಣ ಯರಾಶಿ ಹಾಗೂ ಹನಮಂತಗೌಡ ಪಾಟೀಲ್, ಕುಕನೂರಿನ ಸತ್ಯನಾರಾಯಣ ಹರಪನಹಳ್ಳಿ, ಮಾಜಿ ಜಿ.ಪಂ. ಸದಸ್ಯರಾದ ಅಶೋಕ ತೋಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಕಾಶಿಂಸಾಬ ದಿ ತಳಕಲ್, ಕುಕನೂರ ಗ್ಯಾರಂಟಿ ಈ ಯೋಜನೆಗಳ ಅನುಷ್ಟಾನ ಸಮಿತಿ ತಾಲೂಕ ಅಧ್ಯಕ್ಷರಾದ ಸಂಗಮೇಶ ಗುತ್ತಿ ಭಾಗವಹಿಸುವರು.
