BIG NEWS : ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ : ಗೃಹ ಸಚಿವ ಡಾ.ಜಿ ಪರಮೇಶ್ವರ್

You are currently viewing BIG NEWS : ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ : ಗೃಹ ಸಚಿವ ಡಾ.ಜಿ ಪರಮೇಶ್ವರ್

ಪ್ರಜಾ ವೀಕ್ಷಣೆ ಸುದ್ದಿ :-

ads place

BIG NEWS : ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ : ಗೃಹ ಸಚಿವ ಡಾ.ಜಿ ಪರಮೇಶ್ವರ್

ಕೊಪ್ಪಳ : ‘ಕರ್ನಾಟಕ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಹೊರಟಿದ್ದೇವೆ ಅದರ ಪ್ರಯುಕ್ತ ರಾಜ್ಯದಲ್ಲಿ ಡ್ರಗ್ಸ್ ತೆಗೆಯುವುದಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಗೃಹ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ads place

ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪರಮೇಶ್ವರ್, ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ. ಜಿಲ್ಲೆಯ ಆನೆಗೊಂದಿ ಭಾಗದಲ್ಲಿ ಡ್ರಗ್ಸ್ ಮುಕ್ತ ಮಾಡುವುದಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಆನೆಗುಂದಿ ಭಾಗದಲ್ಲಿ ಅವಶ್ಯಕತೆ ಇದ್ದರೇ, ಪೊಲೀಸ್ ಠಾಣೆ ಸ್ಥಾಪಿಸಲು ಸಹ ಸಿದ್ಧವಾಗಿದ್ದೇವೆ. ಪೊಲೀಸರಿಗೆ ಮುಕ್ತವಾಗಿ ಕೆಲಸ ಮಾಡಲು ತಿಳಿಸಿದ್ದೇವೆ ಎಂದು ತಿಳಿಸಿದರು.

ಬಿ ಆರ್ ಪಾಟೀಲ ಮಾಡಿರುವ ಆರೋಪದ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗಂಭೀರ ಆರೋಪವೇನಲ್ಲ ಈ ಬಗ್ಗೆ ಸಂಬಂಧಿಸಿದೆ ಸಚಿವರೊಂದಿಗೆ ಮಾತನಾಡಿ ಪೊಲೀಸರಿಗೆ ದೂರ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಚ್.ಕೆ.ಪಾಟೀಲ್ ಅವರು ಗಣಿ ಅಕ್ರಮದ ಪತ್ರ ಬರೆದಿದ್ದಾರೆ. ಗಣಿ ಅಕ್ರಮದಲ್ಲಿ 1.5 ಲಕ್ಷ ಕೋಟಿ ರೂ. ದುರುಪಯೋಗವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳಲು ಹೇಳಿದ್ದಾರೆ. ಲೂಟಿ ಮಾಡಿದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಲಹೆ ನೀಡಿ ಈ ಪತ್ರ ಬರೆದಿದ್ದಾರೆ. ನಾವು ಕೂಡ ಇದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ads place

ರಾಜ್ಯದಲ್ಲಿ ಎರಡು ವರ್ಷಗಳಿಂದ ಉತ್ತಮ ಅಭಿವೃದ್ಧಿಯುತ ಜನಪರ ಆಡಳಿತ ನೀಡುತ್ತಿದ್ದೇವೆ. ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸುವ ಕೆಲಸ ಮಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ಲಕ್ಷ ಕೋಟಿ ಖರ್ಚು ಮಾಡಿದ್ದೇವೆ ಆದರೂ ಸಹ ಅಭಿವೃದ್ಧಿ ಯೋಜನೆಗಳನ್ನು ಸ್ಥಗಿತಗೊಳಿಸಿಲ್ಲ. ರಾಜ್ಯದಲ್ಲಿ ಸಾವಿರಾರು ಪಿಎಸ್ಐ ಸ್ಥಾನ ಖಾಲಿಯಾಗಿದ್ದು, ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ads place

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಭೋಸರಾಜು, ಸಂಸದ ರಾಜಶೇಖರ್ ಹಿಟ್ನಾಳ್, ಕಾಂಗ್ರೇಸ್‌ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಬಸವರಾಜ್‌ ಹಿಟ್ನಾಳ್‌, ನಗರ ಸಭೆ ಅಧ್ಯಕ್ಷ ಅಮ್ಮದ್ ಪಟೇಲ್, ನಗರ ಸಭೆ ಸ್ಥಾಯಿ ಸಮಿತಿ ಸದಸ್ಯ ಅಕ್ಬರ್ ಪಾಷಾ ಪಲ್ಟಾನ ಹಾಗೂ ಇನ್ನಿತರರು ಇದ್ದರು.

Leave a Reply

error: Content is protected !!