ಬೆಳಗಾವಿ : ಜಿಲ್ಲೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಅಥಣಿ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬ ಪ್ರಶ್ನೆಗೆ ಉತ್ತರ
ಈಗಾಗಲೇ ಸಿಕ್ಕಿದೆ. ಆದರೆ, ವಲಸಿಗ ಮಹೇಶ್ ಕುಮಟಳ್ಳಿಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಗ್ ಶಾಕ್ ನೀಡಿದೆ. ‘ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದರು.
ರಾಜ್ಯದ ಹೈವೋಲ್ಟೇಸ್ ಕ್ಷೇತ್ರ ಅಥಣಿ ಕ್ಷೇತ್ರದ ಟಿಕೆಟ್ ಮಿಸ್ ಆದ ಬೆನ್ನಲ್ಲೆ ಜಿಲ್ಲೆಯ ಅಥಣಿಯಲ್ಲಿ ಲಕ್ಷ್ಮಣ್ ಸವಧಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ‘ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ವಿಶ್ವಾಸವಿತ್ತು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಮುಂದೆ ನೋಡ್ತಿನಿ. ನನ್ನ ಜತೆ ಹಲವಾರು ಕಾರ್ಯಕರ್ತರು ಕೆಲಸ ಮಾಡುತ್ತಿದ್ದರು. ಅಥಣಿ ಕ್ಷೇತ್ರದಲ್ಲಿ ಜನರೇ ನನ್ನ ಹೈಕಾಮಾಂಡ್. 20 ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ದುಡಿದಿದ್ದೇನೆ. ನನ್ನಿಂದ ಪಕ್ಷಕ್ಕೆ ಸಮಸ್ಯೆಯಾಗಿದ್ರೆ, ಕ್ಷಮಿಸಿ, ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮುಂದಿನ ನಿರ್ಧಾರವನ್ನು ನಾಳೆ ಸಂಜೆಯ ಒಳಗೆ ತಿಳಿಸುತ್ತೇನೆ ಎಂದಿದ್ದಾರೆ.
ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ನಾನು ನಿರ್ಧಾರ ಮಾಡುತ್ತೇನೆ. ಟಿಕೆಟ್‌ಗಾಗಿ ನಾನು ಭಿಕ್ಷೆ ಬೇಡಬೇಕಾ? ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದೆ. ಈ ನಿಟ್ಟಿನಲ್ಲಿ ಪಕ್ಷಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ಮತ್ತು ರಾಜ್ಯದ ಪ್ರಮುಖ ನಾಯಕರ ವಿರುದ್ಧ ಲಕ್ಷ್ಮಣ್ ಸವಧಿ ಬೇಸರ ವ್ಯಕ್ತಪಡಿಸಿದ್ದಾರೆ.