LOCAL NEWS : ಮುದಗಲ್ಲ ಸಮುದಾಯ ಆರೋಗ್ಯ ಕೇಂದ್ರ ದಲ್ಲಿ ಆಶಾ ಕಿರಣ ದೃಷ್ಟಿ ಕೇಂದ್ರ ಕೊಠಡಿ ಸ್ಥಾಪನೆ..!!

You are currently viewing LOCAL NEWS : ಮುದಗಲ್ಲ ಸಮುದಾಯ ಆರೋಗ್ಯ ಕೇಂದ್ರ ದಲ್ಲಿ ಆಶಾ ಕಿರಣ ದೃಷ್ಟಿ ಕೇಂದ್ರ ಕೊಠಡಿ ಸ್ಥಾಪನೆ..!!
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 40;

ಮುದಗಲ್ಲ ವರದಿ..

LOCAL NEWS : ಮುದಗಲ್ಲ ಸಮುದಾಯ ಆರೋಗ್ಯ ಕೇಂದ್ರ ದಲ್ಲಿ ಆಶಾ ಕಿರಣ ದೃಷ್ಟಿ ಕೇಂದ್ರ ಕೊಠಡಿ ಸ್ಥಾಪನೆ ..!

ಆಶಾಕಿರಣ ಯೋಜನೆ : ನಿಮ್ಮ ಮನೆಯ ಬಾಗಿಲಿಗೆ ಉಚಿತ ಕಣ್ಣಿನ ಆರೈಕೆ….!!

ಮುದಗಲ್ಲ :- ಆಶಾ ಕಿರಣ ದೃಷ್ಟಿ ಕೇಂದ್ರಗಳನ್ನು ಮುದಗಲ್ಲ ಸಮುದಾಯ ಆರೋಗ್ಯ ಕೇಂದ್ರನಲ್ಲಿ ಸ್ಥಾಪಿಸಲಾಗಿದ್ದು, ಅಂಧತ್ವ ಸಮಸ್ಯೆಯಿಂದ ಬಳಲುತ್ತಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ!! ವಿನೋದ್ ಕುಮಾರ್ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಆಶಾ ಕಿರಣ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಆಶಾ ಕಿರಣ ಕೇಂದ್ರಗಳನ್ನು ಸ್ಥಾಪಿಸಲಾಗಿರುವ ಪೈಕಿ ರಾಯಚೂರು ಜಿಲ್ಲೆಗೆ 11 ಆಶಾ ಕಿರಣ ದೃಷ್ಟಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 1,ರಿಮ್ಸ್ ಭೋಧಕ ಆಸ್ಪತ್ರೆ, 4,ತಾಲೂಕ ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದಗಳಲ್ಲಿ 6 ಕಡೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಈ ಕೇಂದ್ರಗಳಲ್ಲಿ ಜಿಲ್ಲೆಯಲ್ಲಿರುವ ಕಾಯಂ ನೇತ್ರಾಧಿಕಾರಿಗಳನ್ನು ಶಾಶತ್ವ ನಿಯೋಜನೆ ಮಾಡಿ, ಕೇಂದ್ರಗಳಿಗೆ ಸ್ಥಳೀಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಂದ ಪ್ರಾಥಮಿಕ ಆರೋಗ್ಯ ಸುರಕ್ಷ ಅಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರು ಮನೆ ಮನೆ ಭೇಟಿ ನೀಡಿ ದೃಷ್ಟಿ ದೋಷ ಹೊಂದಿದವರನ್ನು ತಪಾಸಣೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ. ವಿನೋದ್ ಕುಮಾರ್ ,ಡಾ.ಶಮೀಮ್ ಸುಲ್ತಾನಾ, ಡಾ.ವಿಕಾಸ್ ಪಾಟೀಲ್, ಶ್ರೀಧರ್ ನೇತ್ರಾಧಿಕಾರಿ ಹಾಗೂ ಇತರರು ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ:- ಮಂಜುನಾಥ ಕುಂಬಾರ

 

 

Leave a Reply

error: Content is protected !!