BREAKING : ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇಕಡಾ 70ರಷ್ಟು ಶಿಕ್ಷಕರ ನೇಮಕಾತಿಗೆ ಸರ್ಕಾರ ಗ್ರೀನ್‌ ಸಿಗ್ನಲ್ : ಸಚಿವ ಮುಧು ಬಂಗಾರಪ್ಪ

You are currently viewing BREAKING : ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇಕಡಾ 70ರಷ್ಟು ಶಿಕ್ಷಕರ ನೇಮಕಾತಿಗೆ ಸರ್ಕಾರ ಗ್ರೀನ್‌ ಸಿಗ್ನಲ್ : ಸಚಿವ ಮುಧು ಬಂಗಾರಪ್ಪ

ಪ್ರಜಾ ವೀಕ್ಷಣೆ ಸುದ್ದಿ :- 

BREAKING : ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇಕಡಾ 70ರಷ್ಟು ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಗ್ರೀನ್‌ ಸಿಗ್ನಲ್ : ಸಚಿವ ಮುಧು ಬಂಗಾರಪ್ಪ

ಕುಕನೂರು : ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆಯ ವಿಷಯವನ್ನು ಮನಗಂಡು, ಶೇಕಡಾ 70ರಷ್ಟು ಶಿಕ್ಷಕರ ನೇಮಕಾತಿಗೆ ಈಗಾಗಲೇ ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್‌ ಸಿಗ್ನಲ್ ದೊರೆತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಪಟ್ಟಣದ ಪ್ರವಾಸಿ ಮದಿರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಗುಣ ಮಟ್ಟವನ್ನು ಸುಧಾರಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕೆ ಪೂರಕವಾಗಿ ಇದೇ ಭಾಗದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇಕಡಾ 70ರಷ್ಟು ಶಿಕ್ಷಕರ ನೇಮಕಾತಿಯನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾಡಲು ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿವೆ ಜೊತೆಗೆ ಹಣಕಾಸು ಇಲಾಖೆಯಿಂದಲೂ ಅನುಮೋದನೆ ಸಿಕ್ಕಿದೆ. ಆದರೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮೀಕ್ಷೆಯ ವರದಿ ಬಂದ ಮೇಲೆ ಈ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.

Leave a Reply

error: Content is protected !!