ಕುಕನೂರು : ನಾಳೆ ದೇಶಾದ್ಯಂತ ‘ಭಾರತ್ ಬಂದ್’ ಎಂದು ಅಸಂಘಟಿತ ಕಾರ್ಮಿಕರ ಸಂಘ ಸಂಸ್ಥೆಗಳು ಘೋಷಣೆ ಮಾಡಿದೆ. ಹಲವಾರು ಒಕ್ಕೂಟಗಳ ಅನೇಕ ಕಾರ್ಮಿಕರು “ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ಪ್ರತಿಭಟಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನಾಳೆ ಅಸಂಘಟಿತ ಕಾರ್ಮಿಕರು ಸೇರಿದಂತೆ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರು ಜಿಲ್ಲೆ ಹಾಗೂ ತಾಲೂಕಿನಲ್ಲಿ ನಾಳೆ (ಜುಲೈ 9ರಂದು) ಮುಷ್ಕರದಲ್ಲಿ ಭಾಗಿಯಾಗಿದ್ದಾರೆ ಎಂದು ಮಾಹಿತಿ ಇದೆ.
ಇದರಿಂದ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿ ಯಾವುದೇ ತೊಂದರೆಯಾಗಂತೆ ನೋಡಿಕೊಳ್ಳುತ್ತೇವೆ ಎಂದು ಅಕ್ಷರ ದಾಸೋಹದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.