LOCAL NEWS : ಕಾಲುವೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ…!
ಕೊಪ್ಪಳ : ಕಾಲುವೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಡ್ಯಾಂನಲ್ಲಿರುವ ಎಡದಂಡೆ ಕಾಲುವೆ ಬಳಿ ನಡೆದಿದೆ.
ಮೃತರನ್ನು ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದ ಪ್ರವೀಣ್ ಕುಮಾರ್ (18) ಹಾಗೂ ಸಣಾಪುರ ಗ್ರಾಮದ ಅಂಜಲಿ (18) ಎಂದು ಗುರುತಿಸಲಾಗಿದೆ.
ಇವರಿಬ್ಬರು ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಮನೆ ಬಿಟ್ಟು ಓಡಿ ಹೋಗಿದ್ದರು. ನಂತರ ಪೋಷಕರು ಮದುವೆ ಮಾಡಿ ಕೊಡುವ ಭರವಸೆ ನೀಡಿದ್ದರಿಂದ ಮನೆಗೆ ಮರಳಿದ್ದರು ಎನ್ನಲಾಗಿದೆ. ಆದರೆ, ಮನೆಯವರು ಒಂದಾಗಲು ಬಿಡುವುದಿಲ್ಲ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.