LOCAL NEWS : ಪರಿಶಿಷ್ಟ ಜಾತಿಯ ಕಾನೂನು ಪದವಿಧರರಿಗೆ ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನ..!

You are currently viewing LOCAL NEWS : ಪರಿಶಿಷ್ಟ ಜಾತಿಯ ಕಾನೂನು ಪದವಿಧರರಿಗೆ ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನ..!

ಪ್ರಜಾ ವೀಕ್ಷಣೆ ಸುದ್ದಿ :

LOCAL NEWS : ಪರಿಶಿಷ್ಟ ಜಾತಿಯ ಕಾನೂನು ಪದವಿಧರರಿಗೆ ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನ..!


ಕೊಪ್ಪಳ : ಸಮಾಜ ಕಲ್ಯಾಣ ಇಲಾಖೆಯಿಂದ 2024-25 ಮತ್ತು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವಿಧರರಿಗೆ ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


2024-25 ಮತ್ತು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ನೀಡಲು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಇವರ ಪತ್ರದನ್ವಯ ವರ್ಷದ ಎಲ್ಲಾ ದಿನಗಳು ಅಂದರೆ 365 ದಿನಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ #https://swd.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಸೆಪ್ಟೆಂಬರ್ 10ರೊಳಗೆ ತಮ್ಮ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!