ಕುಕುನೂರು : ಬಿಜೆಪಿಯ ಬಂಡಾಯ ಅಭ್ಯರ್ಥಿ ಸಮಾಜದ ಸೇವಕ ಶರಣಪ್ಪ ಗುಂಗಾಡಿ 2023ರ ವಿಧಾನಸಭಾ ಚುನಾವಣೆಗೆ ಯಲಬುರ್ಗಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಕಾರಣ ಪಕ್ಷೇತರನಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿದ್ದಾರೆ.
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಹಾಗೂ ಚುನಾವಣೆಗೆ ಸ್ಪರ್ಧಿಸುವ ಸಲುವಾಗಿಯೇ ಸರ್ಕಾರಿ ನೌಕರರನ್ನು ಬಿಟ್ಟು ಸಮಾಜ ಸೇವೆ ಮಾಡುತ್ತಾ ಬೆಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ, ಶರಣಪ್ಪ ಗುಂಗಾಡಿ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ನಮ್ಮ ಪ್ರಜಾ ವೀಕ್ಷಣೆ ತಂಡದೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಗೆ ಯಲಬುರ್ಗಾ ಕ್ಷೇತ್ರದಿಂದ ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಟಿಕೆಟ್ ಹಂಚಿಕೆಯ ಕೊನೆಯವರೆಗೂ ನನಗೆ ಟಿಕೆಟ್ ಸಿಗುತ್ತದೆ ಎಂಬ ಭರವಸೆಯಲ್ಲಿ ಇದ್ದೆ ಆದರೆ ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ್ದು ಯಾವ ಕಾರಣಕ್ಕೂ ನಾನು ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ. ಹಾಗೆಯೇ ಯಾವುದೇ ಆಸೆ ಆಮಿಷಗಳಿಗೆ ಬಗ್ಗುವುದಿಲ್ಲ. ನಾನು ಈ ಮೊದಲಿನಿಂದಲೂ ಹೇಳಿದಂತೆ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ಮಾತಿನಂತೆ ನಾನು ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ. ಶಾಸಕರು ಹೇಗೆ ಟಿಕೆಟ್ ತಂದಿದ್ದಾರೆ ಎಂಬುದು ನನಗೆ ಗೊತ್ತಿದೆ ಹಾಲಿನ ಅವಶ್ಯಕತೆ ಇಲ್ಲ. ಈ ಬಾರಿಯ ಚುನಾವಣೆಯಲ್ಲಿ ಯಾರು ಎಷ್ಟು ಹಣ ಖರ್ಚು ಮಾಡಿದರೂ ಸಹ ಗೆಲುವು ಅಷ್ಟು ಸುಲಭವಲ್ಲ, ಜನ ಎಲ್ಲವನ್ನೂ ನೋಡುತ್ತಿದ್ದಾರೆ. ಸಚಿವ ಹಾಲಪ್ಪ ಆಚಾರ್ ಗೆಲುವಿನ ಲೆಕ್ಕಾಚಾರದಲ್ಲಿ ಮೂರು ಅಥವಾ ನಾಲ್ಕನೇ ಸ್ಥಾನದಲ್ಲಿ ಇರಲಿದ್ದಾರೆ. ನಾನು ಕ್ಷೇತ್ರದ ಎಲ್ಲಾ ಹಳ್ಳಿಗಳ ಜನರ ಸಂಪರ್ಕದಲ್ಲಿ ಇದ್ದೇನೆ ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಜನ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಹೇಳಿದರು.
ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಶರಣಪ್ಪ ಗುಂಗಾಡಿ ಪಕ್ಷೇತರನಾಗಿ ಇರಬಹುದು. ಆದರೆ ಮತ್ತೋರ್ವ ಪ್ರಭಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನವೀನ್ ಗುಳಗಣ್ಣನವರಿಗೂ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ಅವರ ಮುಂದಿನ ನಡೆ ತೀವ್ರ ಕುತೂಹಲವನ್ನು ಉಂಟು ಮಾಡಿದೆ.
ಬಿಜೆಪಿಯ ಬಂಡಾಯ ಅಭ್ಯರ್ಥಿ ಶರಣಪ್ಪ ಗುಂಗಾಡಿ, ಪಕ್ಷೇತರನಾಗಿ ಸ್ಪರ್ಧೆ
