LOCAL NEWS : ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಪರವಾದ ಕಾನೂನುಗಳು : ವಿದ್ಯಾರ್ಥಿಗಳಿಗೆ ಜಾಗೃತಿ
ಯಲಬುರ್ಗಾ : ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾಗಿ ಕಾನೂನುಗಳು ವಿಶೇಷವಾಗಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006, ತಿದ್ದುಪಡಿ-2016, ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ 2012ರ ಕುರಿತು, ಸುರಕ್ಷಿತ ಸ್ಪರ್ಶ-ಕುರಿತು ಹಾಗೂ ಮಕ್ಕಳ ರಕ್ಷಣಾ ನೀತಿ 2016ರ ಅಂಶಗಳ ಅನುಷ್ಠಾನದ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಔಟ್‌ರೀಚ್ ವರ್ಕರ್ ಪ್ರತಿಭಾ ಕಾಶಿಮಠ ಅವರು ಸಂಪೂರ್ಣ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯವೈಖರಿ, ಮಕ್ಕಳ ಸಹಾಯವಾಣಿ-1098 ಮತ್ತು ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆಗಳ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕ ರವಿ ಬಡಿಗೇರ್ ಅವರು ಮಕ್ಕಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಮಯ್ಯ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ತಿದ್ದುಪಡಿ-2016 ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆಯನ್ನು ಕಾಲೇಜಿನ ಅಧ್ಯಾಪಕಿ ಲಕ್ಷಿö್ಮÃ ಅವರು ನಿರ್ವಹಿಸಿದರು.