LOCAL NEWS : ಕೊಪ್ಪಳ ಲೋಕಾಯುಕ್ತ: ಜು. 19 ರಂದು ಯಲಬುರ್ಗಾದಲ್ಲಿ ಅಹವಾಲು ಸ್ವೀಕಾರ ಸಭೆ!!

You are currently viewing LOCAL NEWS : ಕೊಪ್ಪಳ ಲೋಕಾಯುಕ್ತ: ಜು. 19 ರಂದು ಯಲಬುರ್ಗಾದಲ್ಲಿ ಅಹವಾಲು ಸ್ವೀಕಾರ ಸಭೆ!!

ಪ್ರಜಾ ವೀಕ್ಷಣೆ ಸುದ್ದಿ : 

LOCAL NEWS : ಕೊಪ್ಪಳ ಲೋಕಾಯುಕ್ತ: ಜು. 19 ರಂದು ಯಲಬುರ್ಗಾದಲ್ಲಿ ಅಹವಾಲು ಸ್ವೀಕಾರ ಸಭೆ!!

ಕೊಪ್ಪಳ : ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕುಗಳನ್ನೊಳಗೊಂಡಂತೆ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಲು ಜುಲೈ 19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಯಲಬುರ್ಗಾ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಎಲ್ಲಾ ಇಲಾಖೆಯ ತಾಲ್ಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಲಂಚ ಕೇಳುವುದು ಇತ್ಯಾದಿ ದುರಾಡಳಿತದಲ್ಲಿ ತೊಡಗಿದ್ದರೆ, ಈ ಕುರಿತು ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 & 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ. ಸಂಬಂಧಿಸಿದ ತಾಲ್ಲೂಕಿನ ಸಾರ್ವಜನಿಕರು ಈ ಸಭೆಯ ಸದುಪಯೋಗ ಪಡೆದುಕೊಳ್ಳಲು ಈ ಮೂಲಕ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9364062699, 9364062700, 9364062701, 9364062702 ಹಾಗೂ 9364062703 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!