BIG BREAKING : ಧರ್ಮಸ್ಥಳದಲ್ಲಿ ಹೆಣ್ಣುಮಕ್ಕಳ ಸರಣಿ ಹತ್ಯೆ ಪ್ರಕರಣ : ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ..!!
ಮೈಸೂರು : ಧರ್ಮಸ್ಥಳದಲ್ಲಿ ನಡೆದಿದೆ ಎಂದು ಹೇಳಲಾಗುತ್ತೀರುವ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದರು.
ಈ ವಿಚಾರವಾಗಿ ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ‘ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಮಾಡುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಸದ್ಯಕ್ಕೆ ಈ ವಿಚಾರವಾಗಿ ಎಸ್ಐಟಿ ರಚನೆ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.