BREAKING : ರಾಜ್ಯದ ಎಲ್ಲ ಔಷಧ ಅಂಗಡಿ ಮುಂದೆ ‘ವೈದ್ಯರ ಅನುಮತಿಯಿಲ್ಲದೆ ಔಷಧ ಮಾರಾಟ ನಿಷೇಧ’ ಎಂಬ ನಾಮಫಲಕ ಕಡ್ಡಾಯ..!!
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿಲಾಗುತ್ತದೆ ಹಾಗೇ ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ, ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಮಹತ್ವದ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ 6 ನೇ ರಾಜ್ಯ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಡಾ.ಶಾಲಿನಿ ರಜನೀಶ್ ಅವರು ಮಾತನಾಡಿ, ‘ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್ಸೈಟ್ ನವೀಕರಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಬೇಕು ಎಂದು ಸೂಚನೆ ನೀಡಿದರು.
‘ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ನಿರ್ದೇಶನ ನೀಡಿದರು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ‘ಮಾದಕಮುಕ್ತ ರಾಜ್ಯ’ ನಿರ್ಮಾಣದ ದಿಶೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಎಲ್ಲ ಔಷಧ ಅಂಗಡಿಗಳ ಮುಂದೆ “ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ ” ಎಂಬ ನಾಮ ಫಲಕ ಕಡ್ಡಾಯವಾಗಿ ಅಳವಡಿಸಲು ಕ್ರಮ ಜರುಗಿಸಬೇಕು. ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನಗಳನ್ನು (ಎಸ್.ಓ.ಪಿ) ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಒಂದು ಕೇಂದ್ರಕ್ಕೆ ಭೇಟಿ ನೀಡಿ, ವರದಿ ಸಲ್ಲಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
https://x.com/KarnatakaVarthe/status/1947655074274017746?ref_src=twsrc%5Etfw