ಮುದಗಲ್ಲ : ಬೈಕ್ ಮೇಲೆ ಮರ ಬಿದ್ದು ಗಂಡ-ಹೆಂಡತಿ ಸಾವು, ಮಗಳಿಗೆ ಗಾಯ..!
ಬೃಹತ್ ಆಕಾರದ ಮರವೊಂದು ಬೈಕ್ ಮೇಲೆ ಬಿದ್ದ ಪರಿಣಾಮ ದಂಪತಿ ಸಾವನ್ನಪ್ಪಿದ್ದು, ಅವರ ಮೂರು ವರ್ಷದ ಮಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.ಬೃಹದಾರದ ಮರವೊಂದು ಬೈಕ್ ಸವಾರರ ಮೇಲೆ ಉರುಳಿಬಿದ್ದ ಪರಿಣಾಮ ಪತಿ-ಪತ್ನಿ ಮೃತಪಟ್ಟಿದ್ದು, ಅವರ ಮಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮುದಗಲ್‌ನಲ್ಲಿ ಬುಧವಾರ ನಡೆದಿದೆ. ಮುದಗಲ್ ಪಟ್ಟಣದ ಮದರ್ ಥೆರೆಸಾ ಶಾಲೆ ಬಳಿ ಈ ದುರ್ಘಟನೆ ಸಂಭವಿಸಿದೆ.
ಪತಿ ರಮೇಶ್ ಗುಡದಪ್ಪ(26), ಪತ್ನಿ ಮಂಜುಳಾ(23) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಮೂರು ವರ್ಷ ಮಗಳು ಸಣ್ಣಪುಟ್ಟ ಗಾಯಗಳೊಂದಿಗೆ, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತರನ್ನು ನಾಗಾಲಾಪುರ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮುದಗಲ್ ಪಟ್ಟಣದಿಂದ ನಾಗಲಾಪುರ ಸ್ವಗ್ರಾಮಕ್ಕೆ ಮರಳುವ ವೇಳೆ ಈ ಅಪಘಾತ ನಡೆದಿದೆ.
ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಬೃಹತ್ ಮರವನ್ನು ತೆರವುಗೊಳಿಸುವ ಕೆಲಸ ನಡೆದಿದೆ. ಮಳೆಯಿಂದಾಗಿ ಮರ ಬೈಕ್ ಸವಾರರ ಮೇಲೆ ಬಿದ್ದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಜರುಗಿದೆ.
ಮಾನವಿಯತೆ ಮೆರೆದ ಎಸ್ ಡಿ ಪಿ ಐ ಕಾರ್ಯಕರ್ತರು ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬರದಿರುವುದನ್ನು ಕಂಡ ಎಸ್ ಡಿ ಪಿ ಐ ಕಾರ್ಯಕರ್ತರು ಇಬ್ಬರನ್ನು ಟಾಟಾ ಎ ಸಿ ನಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲೆಸಿದ ಕಾರ್ಯಕರ್ತರು ಹುಸೇನ್ ಬಾಷಾ ಹೈದರಾಬಾದಿ ಹಾಗು ಖಾಸಿಂ ಬುಡ್ಡ
ಸಾರ್ವಜನಿಕರು ಇವರ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿದ್ದಾರೆ