BIG BREAKING : ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ..?

You are currently viewing BIG BREAKING : ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ..?

ಪ್ರಜಾ ವೀಕ್ಷಣೆ ಸುದ್ದಿ :

BIG BREAKING : ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ..?

ಪ್ರಜಾ ವೀಕ್ಷಣೆ  ಡಿಜಿಟಲ್‌ ಡೆಸ್ಕ್‌ : ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ನಾಳೆ ನಡೆಯುವ ಭಾಗಿಧಾರಿ ನ್ಯಾಯ ಸಮ್ಮೇಳನದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಡಿಸೆಂಬರ್ ನಲ್ಲಿ ಸಿಎಂ ಅಗಲಿದ್ದಾರೆ ಎಂದು ಮತ್ತೊಬ್ಬ ಕಾಂಗ್ರೆಸ್ ಶಾಸಕ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜ್ ಅವರು, ‘ಡಿಸೆಂಬರ್ ನಲ್ಲಿ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲಿದ್ದಾರೆ ಎಂದು ಡಿಕೆಶಿ ಆಪ್ತ ಬಳಗದ ಶಾಸಕ ಶಿವಗಂಗಾ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.

‘ಐದು ವರ್ಷದಲ್ಲಿ ಡಿಸೆಂಬರ್‌ ಸಹ ಇದೆಯಲ್ಲವೇ? ಕಾದು ನೋಡಿ ಅಷ್ಟೇ. ಎಲ್ಲರೂ ಒಗ್ಗಟ್ಟಾಗಿದ್ದರೆ ಏನೂ ಸಮಸ್ಯೆ ಇಲ್ಲ. ನಮ್ಮ ಪಕ್ಷದಲ್ಲಿ ವಾಕ್ ಸ್ವಾತಂತ್ರ್ಯವಿದೆ. ಬಿಜೆಪಿ ರೀತಿಯ ಪರಿಸ್ಥಿತಿ ನಮ್ಮಲ್ಲಿಲ್ಲವೆಂದು’ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶಾಸಕರ ಬಾಯಿಗೆ ಬೀಗ ಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Leave a Reply

error: Content is protected !!