FLASH NEWS : ಬಿಸಿಯೂಟ ಸೇವಿಸಿದಂತ 20ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು…!

You are currently viewing FLASH NEWS : ಬಿಸಿಯೂಟ ಸೇವಿಸಿದಂತ 20ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು…!

FLASH NEWS : ಬಿಸಿಯೂಟ ಸೇವಿಸಿದಂತ 20ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು…!

ಪ್ರಜಾವೀಕ್ಷಣೆ ಸುದ್ದಿ : ಮಂಡ್ಯ ಜಿಲ್ಲೆಯ ಮದ್ದೂರ ಶಾಲೆಯೊಂದರಲ್ಲಿ ಬಿಸಿಯೂಟ ಸೇವಿಸಿದಂತ 20ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಎಂಎಲ್ಸಿ ಮಧು ಜಿ ಮಾದೇಗೌಡ ಒಡೆತನದ ಶಿಕ್ಷಣ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಜಿಲ್ಲೆಯ ಮದ್ದೂರಿನ ಕೆ.ಎಂ ದೊಡ್ಡಿಯಲ್ಲಿರುವಂತ “ಭಾರತಿ ಶಿಕ್ಷಣ ಸಂಸ್ಥೆ”ಯ ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದರು. ಆ ನಂತರ ವಾಂತಿ ಬೇಧಿ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ಇದೆ.

20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಬಳಿಕ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಮಂಡ್ಯದ ಮಿಮ್ಸ್ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.

Leave a Reply

error: Content is protected !!