You are currently viewing BIG NEWS : ಜಾಮೀನು ಅರ್ಜಿ ವಜಾ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಿಗ್ ಶಾಕ್..!

BIG NEWS : ಜಾಮೀನು ಅರ್ಜಿ ವಜಾ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಿಗ್ ಶಾಕ್..!

BIG NEWS : ಜಾಮೀನು ಅರ್ಜಿ ವಜಾ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಿಗ್ ಶಾಕ್..!

ಪ್ರಜಾವೀಕ್ಷಣೆ ಸುದ್ದಿ : ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಿಗ್ ಶಾಕ್ ನೀಡಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರಜ್ವರ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿ ವಜಾಗೊಳಿಸಿದೆ. ಹೀಗಾಗಿ ಕಳೆದ 14 ತಿಂಗಳಿನಿಂದ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತವಾಗಿದೆ.

Prajavikshane

Chandru R Bhanapaur

Leave a Reply

error: Content is protected !!