BREAKING : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ..!
ಪ್ರಜಾವೀಕ್ಷಣೆ ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂಬ ಮಾಹಿತಿ ಇದೆ.
ಅದರಂತೆ ಇಂದು ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಕಲೇಶಪುರ, ಬೇಲೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿವರುಣನ ಆರ್ಭಟ ಇದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ರಜೆ ಘೋಷಿಸಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ತೀರ್ಥಹಳ್ಳಿ, ಹೊಸನಗರ, ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಿಸಿದ್ದು, ಭದ್ರಾವತಿ ಹಾಗೂ ಶಿವಮೊಗ್ಗದಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಕಾಲೇಜಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ (ದಿನಾಂಕ 26 ) ಇಂದು ರಜೆ ಘೋಷಿಸಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಇದ್ದು, ಈ ಹಿನ್ನೆಲೆ (ಜುಲೈ 26 ರಂದು) ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.