You are currently viewing BREAKIN NEWS : ಸಾರಿಗೆ ನೌಕರರ ಮುಷ್ಕರ ಆರಂಭ : ಶಾಲಾ ಕಾಲೇಜು ವಿದ್ಯಾರ್ಥಿಗಳ ಪರದಾಟ..!!

BREAKIN NEWS : ಸಾರಿಗೆ ನೌಕರರ ಮುಷ್ಕರ ಆರಂಭ : ಶಾಲಾ ಕಾಲೇಜು ವಿದ್ಯಾರ್ಥಿಗಳ ಪರದಾಟ..!!

BREAKIN NEWS : ಸಾರಿಗೆ ನೌಕರರ ಮುಷ್ಕರ ಆರಂಭ : ಶಾಲಾ ಕಾಲೇಜು ವಿದ್ಯಾರ್ಥಿಗಳ ಪರದಾಟ..!!

ಪ್ರಜಾವೀಕ್ಷಣೆ ಡಿಜಿಟಲ್‌ ಡಸ್ಕ್‌ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇದೀಗ ಇಂದು ಮುಷ್ಕರ ಆರಂಭಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ನಡೆದ ಸಂಧಾನ ಸಭೆ ಕೂಡ ವಿಫಲವಾಗಿದ್ದು, ಇಂದಿನಿಂದ ಸಾರಿಗೆ ನೌಕರರ ಮುಷ್ಕರ ಮಾಡಿದ್ದಾರೆ.

ರಾಜಧಾನಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಬೆಳಗಾವಿ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಇನ್ನೂ ಕೆಲವು ನೌಕರರು ಎಸ್ಮ ಜಾರಿ, ಕೋರ್ಟ್ ಆದೇಶ ಹಾಗೂ ಅಮಾನತ್ತಿನ ಆತಂಕ ಇದ್ದು, ಈ ಹಿನ್ನೆಲೆಯಲ್ಲಿ ಕೆಲವು ನೌಕರರು ಮುಷ್ಕರದಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾರಿಗೆ ನೌಕರರು ಮುಷ್ಕರ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೂ ಕೂಡ ತೊಂದರೆ ಉಂಟಾಗಲಿದೆ. ನಿತ್ಯ ಸಾರಿಗೆ ಬಸ್‌ಗಳಲ್ಲಿ ಸಂಚರಿಸುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂದು ಪರದಾಟ ನಡೆಸುವ ಸಾಧ್ಯತೆ ಇದ್ದು, ಖಾಸಗಿ ವಾಹನಗಳ ಮೊರೆ ಹೋಗುವ ಅನಿವಾರ್ಯತೆ ಇದೆ. ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಶಾಲಾ ಕಾಲೇಜುಗಳಿಗೆ ಇಂದು ರಜೆ ಇರುವುದಿಲ್ಲ ಎಂಬ ಮಾಹಿತಿ ಇದೆ.

Prajavikshane

Chandru R Bhanapaur

Leave a Reply

error: Content is protected !!