BREAKING : ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ಸಂಬಳ ಕಟ್, ರಜೆ ರದ್ದು : ಅಧಿಕಾರಿಗಳಿಂದ ಖಡಕ್‌ ಸೂಚನೆ!

You are currently viewing BREAKING : ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ಸಂಬಳ ಕಟ್, ರಜೆ ರದ್ದು : ಅಧಿಕಾರಿಗಳಿಂದ ಖಡಕ್‌ ಸೂಚನೆ!

BREAKING : ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ಸಂಬಳ ಕಟ್, ರಜೆ ರದ್ದು : ಅಧಿಕಾರಿಗಳಿಗೆ ಖಡಕ್‌ ಸೂಚನೆ!

ಪ್ರಜಾವೀಕ್ಷಣೆ ಡಿಜಿಟಲ್‌ ಡಸ್ಕ್‌ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇದೀಗ ಇಂದು ಮುಷ್ಕರ ಆರಂಭಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ನಡೆದ ಸಂಧಾನ ಸಭೆ ಕೂಡ ವಿಫಲವಾಗಿದ್ದು, ಇಂದಿನಿಂದ ಸಾರಿಗೆ ನೌಕರರ ಮುಷ್ಕರ ಮಾಡಿದ್ದಾರೆ.

ಇದರ ಬೆನ್ನೆಲ್ಲೆ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ಒಂದನ್ನು ನೀಡಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ಸಂಬಳ ಹಾಗೂ ರಜೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ರಾಜಧಾನಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಬೆಳಗಾವಿ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಇನ್ನೂ ಕೆಲವು ನೌಕರರು ಎಸ್ಮ ಜಾರಿ, ಕೋರ್ಟ್ ಆದೇಶ ಹಾಗೂ ಅಮಾನತ್ತಿನ ಆತಂಕ ಇದ್ದು, ಈ ಹಿನ್ನೆಲೆಯಲ್ಲಿ ಕೆಲವು ನೌಕರರು ಮುಷ್ಕರದಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾರಿಗೆ ನೌಕರರ ರಜೆ ರದ್ದು ಮಾಡಿದ ಇಲಾಖೆ. ಮುಷ್ಕರದಲ್ಲಿ ಭಾಗಿಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಡ್ಯೂಟಿ ಮಾಡಿಲ್ಲ ಅಂದರೆ ಸಂಬಳ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ ಸಾರಿಗೆ ನೌಕರರಿಗೆ ಯಾವುದೇ ರಜೆ ಇರುವುದಿಲ್ಲ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಜೆ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!