BREAKING : ಕಾಂಗ್ರೆಸ್‌ನ ಎಂಎಲ್‌ಸಿ ಶರಣಗೌಡ ಬಯ್ಯಾಪುರ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆಗೆ ಯತ್ನ..!!

You are currently viewing BREAKING : ಕಾಂಗ್ರೆಸ್‌ನ ಎಂಎಲ್‌ಸಿ ಶರಣಗೌಡ ಬಯ್ಯಾಪುರ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆಗೆ ಯತ್ನ..!!

ಪ್ರಜಾವೀಕ್ಷಣೆ ಸುದ್ದಿ : –

BREAKING : ಕಾಂಗ್ರೆಸ್‌ನ ಎಂಎಲ್‌ಸಿ ಶರಣಗೌಡ ಬಯ್ಯಾಪುರ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆಗೆ ಯತ್ನ..!!

ರಾಯಚೂರು : ಕಾಂಗ್ರೆಸ್‌ನ ಎಂಎಲ್‌ಸಿ ಶರಣಗೌಡ ಬಯ್ಯಾಪುರ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆಗೆ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆಯಲ್ಲಿ ಹಲ್ಲೆಗೆ ಯತ್ನಿಸಿದಂತ ಅವರ ಆಪ್ತ, ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳದಲ್ಲಿದ್ದಂತ ಸಾರ್ವಜನಿಕರು ಥಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಯಚೂರಿನ ಜಿಲ್ಲೆಯ ಗೋರೆಬಾಳ ಗ್ರಾಮದಲ್ಲಿ ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರೇ ಅಡ್ಡಗಟ್ಟಿದ್ದು, ಲಿಂಗಸಗೂರು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಗೋವಿಂದ್ ನಾಯಕ್ ಯಾರೆಂದು ಗೊತ್ತಿಲ್ಲ? ಎಂದು ಶರಣಗೌಡ ಬಯ್ಯಾಪುರ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ಈ ಕುರಿತು ಇಂದು ಶರಣಗೌಡ ಬಯ್ಯಾಪುರ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಆ ಬಳಿಕ ಮಾತಿಗೆ ಮಾತು ಬೆಳೆದು ಹಲ್ಲೆ ಯತ್ನವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದಿದೆ.

Leave a Reply

error: Content is protected !!