ಮುದಗಲ್ಲ ವರದಿ..
ಸದುಪಯೋಗವಾಗಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ
ಯೋಜನೆಯ ಸುಜ್ಞಾನ ನಿಧಿ ಶಿಷ್ಯವೇತನ:-ಮೋಹನ ನಾಯಕ..
ಮುದಗಲ್ ಆ,05: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಗ್ರಾಮೀಣ ಭಾಗದ ಮಹಿಳೆಯರ ಬದುಕಿನ ಆಶಾಕಿರಣವಾಗಿದೆ ಎಂದು ಜಿಲ್ಲಾ ನಿರ್ದೇಶಕ ಮೋಹನ ನಾಯಕ ಮಂಗಳವಾರ ಹೇಳಿದರು.
ಪಟ್ಟಣದ ಶ್ರೀ ವಿಜಯ ಮಹಾಂತೇಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ ಬಡ ವಿದ್ಯಾರ್ಥಿಗಳ ಸುಜ್ಞಾನ ನಿಧಿ ಶಿಷ್ಯವೇತನ ಮತ್ತು ಜ್ಞಾನದೀಪ ಶಿಕ್ಷಕರ ಪ್ರಮಾಣಪತ್ರ ವಿತರಣ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಮಹಿಳೆಯರಿಗೆ ಧರ್ಮಸ್ಥಳ ಸಂಸ್ಥೆ ಸ್ವಸಹಾಯ ಗುಂಪಿನ ಮೂಲಕ ಸಹಕಾರಿಯಾಗಿದೆ. ಸಂಸ್ಥೆಯ ಕಾರ್ಯವೈಖರಿ ಕಂಡು ರಾಷ್ಟ್ರೀಕೃತ ಕೆಲ ಬ್ಯಾಂಕುಗಳು ಕೈಜೋಡಿಸಿವೆ. ಕ್ಷೇತ್ರದ ಅನುದಾನದಿಂದ ಹಣಕಾಸು ವ್ಯವಹಾರ ಮಾಡುವ ಜತೆಗೆ ಧಾರ್ಮಿಕ, ಸಾಮಾಜಿಕ, ಬಡ ಮಕ್ಕಳ ಶೈಕ್ಷಣಿಕ ಸಹಕಾರ ಕಾರ್ಯ ಮಾಡಲಾಗುತ್ತಿದೆ. ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಜತೆಗೆ ಸಮಾಜದಲ್ಲಿ ಮುಖ್ಯವಾಹಿನಿಗೆ ತರುವ ಕೆಲಸ ಮಾಡಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯರಾದ ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಧರ್ಮಪತ್ನಿ ಡಾ. ಹೇಮಾವತಿ ಅಮ್ಮನವರ ಕನಸನ್ನು ಯೋಜನೆಯ ಮೂಲಕ ಸಕಾರಗೊಳಿಸಲಾಗುತ್ತಿದೆ ಎಂದು ಹೇಳಿದರು.
ತಾಲೂಕು ಯೋಜನಾಧಿಕಾರಿ ಅಡಿವೆಯ್ಯಸ್ವಾಮೀ ಮಾಲಗಿತ್ತಿಮಠ ಮಾತನಾಡಿ ಧರ್ಮಸ್ಥಳ ಸಂಸ್ಥೆ ಕೇವಲ
ಶಿಷ್ಯವೇತನ ನೀಡುವುದಲಕಲ್ಲದೇ ಹಲವು ಯೋಜನೆಗಳು
ಮನೆಬಾಗಿಲೆಗೆ ತಲುಪುವಂತೆ ಮಾಡಿದ್ದಾರೆ ಎಂದರು. ಮಕ್ಕಳಿಗೆ ಶಿಕ್ಷಣ ಅತ್ಯಂತ ಅವಶ್ಯವಾಗಿದೆ. ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆನ್ನುವುದರಿಂದ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುವುದಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.
ವೀರೇಂದ್ರ ಹೆಗ್ಗಡೆ ಅವರು ಸುಜ್ಞಾನ ನಿಧಿ ಶಿಷ್ಯವೇತನ ನೀಡುತ್ತಿದ್ದು, ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಪಡೆದುಕೊಳ್ಳಬೇಕು ಎಂದು ಹೇಳಿದರು.ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷೆ ಶಶಿಕಲಾ ಬೋವಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಇತ್ತೀಚೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ವಾರ್ಷಿಕ ಪ್ರಶಸ್ತಿ ಪಡೆದ ಸುದ್ದಿಮೂಲ ಪತ್ರಿಕೆ ವರದಿಗಾರ ಶಶಿಧರ ಕಂಚಿಮಠರಿಗೆ ಸನ್ಮಾನಿಸಿ ಗೌರವಿಸಿದರು.
ಸಂಸ್ಥೆಯ ವತಿಯಿಂದ 32 ವಿದ್ಯಾರ್ಥಿಗಳ ಸುಜ್ಞಾನ ನಿಧಿ ಶಿಷ್ಯವೇತನ, ಜಿಲ್ಲೆಯ ಒಬ್ಬ ಜ್ಞಾನದೀಪ ಶಿಕ್ಷಕಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಕಾರ್ಯಕ್ರಮದ ನಿರೂಪಣೆ ವಲಯ ಮೇಲ್ವಿಚಾರಕ ಆಂಜನೇಯ ನೆರವೇರಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷೆ ತೋಟಮ್ಮ ಅಂಗಡಿ, ವಿಎಲ್ ಞ ಅಯ್ಯಪ್ಪ, ಸೇವಾ ಪ್ರತಿನಿಧಿಗಳಾದ ಶಾರದಾ, ಶಾಂತ, ಶರಣಮ್ಮ ಹಾಗೂ ನೂರಾರು ಮಹಿಳೆಯರು ಇದ್ದರು.
ವರದಿ:- ಮಂಜುನಾಥ ಕುಂಬಾರ