BREAKING : ಡಿಜಿಟಲ್ ಮಾಧ್ಯಮದವರ ಮೇಲೆ ಹಲ್ಲೆ ಪ್ರಕರಣ : 30 ಜನರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲು..!!
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನಿನ್ನೆ ಡಿಜಿಟಲ್ ಮಾಧ್ಯಮದವರ (ಯೂಟ್ಯೂಬರ್‌ಗಳ) ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಂಗಳ ಬಳಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 25-30 ಜನರ ವಿರುದ್ಧ ಕೇಸ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇದೀಗ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 30 ಜನರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೇ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.