BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ..!!

You are currently viewing BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ..!!

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ..!!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌ : ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಲ್ಲಿ ಕಡಿಮೆ ಎಣ್ಣೆ ಹಾಗೂ ಸಕ್ಕರೆ ಸೇವನೆ ಕುರಿತು ಜಾಗೃತಿ ಮೂಡಿಸುವ ಕುರಿತು ಮಾಹಿತಿ ಫಲಕಗಳನ್ನು ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಈ ಮಾಹಿತಿ ಫಲಕ ಗಳನ್ನು ಕಡ್ಡಾಯವಾಗಿ ಶಾಲೆಗಳಲ್ಲಿ ಅಳವಡಿಸಬೇಕು ಎಂದು ಸೂಚಿಸಿದೆ.

ಈ ಕುರಿತು ಕೇಂದ್ರ ಸರ್ಕಾರವು ಭಾರತದಲ್ಲಿ ಆಹಾರ ಪದ್ಧತಿ ಮತ್ತು ಕಡಿಮೆಯಾದ ದೈಹಿಕ ಚಟುವಟಿಕೆಯಿಂದ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ಬೊಜ್ಜು ಅತೀವವಾಗಿ ಏರಿಕೆಯಾಗುತ್ತಿದೆ ಎಂದು ತಿಳಿಸಿದ್ದು, ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ( NFHS 2019-21 ) ವರದಿಯ ಪ್ರಕಾರ ನಗರ ಪ್ರದೇಶಗಳಲ್ಲಿ ಐದರಲ್ಲಿ ಒಬ್ಬ ವಯಸ್ಕರು ಅತಿ ತೂಕ ಮತ್ತು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ದಿ ಲ್ಯಾನ್ಸೆಟ್ ಜಿಬಿಡಿ 2021 ರ ವರದಿಯು 2025 ರಲ್ಲಿ ಪ್ರಕಟವಾಗಿದೆ.

ಈ ವರದಿಯ ಪ್ರಕಾರ ಭಾರತದಲ್ಲಿ ಬೊಜ್ಜು ಅಧಿಕ ತೂಕ ಅಥವಾ ಬೊಜ್ಜು ಹೊಂದುವವರು 2021 ರ ಸಾಲಿನಲ್ಲಿ 18 ಕೋಟಿಯಿಂದ 2050 ರ ವೇಳೆಗೆ 44.9 ಕೋಟಿಗೆ ಏರಿಕೆಯಾಗುವ ನಿರೀಕ್ಷೆಯಿದ್ದು ಭಾರತ ದೇಶವು ಜಾಗತಿಕ ಹೊರೆಯಲ್ಲಿ ಎರಡನೇ ಅತಿ ಹೆಚ್ಚು ಅಧಿಕ ತೂಕ ಮತ್ತು ಬೊಜ್ಜು ವಯಸ್ಕರ ಹೊಂದಿರುವ ದೇಶವಾಗಲಿದೆ ಎಂದು ಸೂಚಿಸಲಾಗಿದೆ.

ಎಲ್ಲಾ ಶಾಲಾ ಆವರಣದಲ್ಲಿ ಸುಲಭವಾಗಿ ಲಭ್ಯವಿರುವ ಸಕ್ಕರೆ ತಿಂಡಿಗಳು, ಪಾನೀಯಗಳು ಮತ್ತು ಸಂಸ್ಕರಿಸಿದ ಆಹಾರಗಳ ಅತಿಯಾದ ಸೇವನೆಯ ಮೂಲಕ ಮಕ್ಕಳಲ್ಲಿ ಬರಬಹುದಾದ ಟೈಪ್ 2 ಮಧುಮೇಹವನ್ನು ತಡೆಗಟ್ಟಲು, ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದು ಪ್ರತ್ಯೆಕ “ಸಕ್ಕರೆ ಮಂಡಳಿ”ಗಳನ್ನು ಸ್ಥಾಪಿಸಿ, ಅಲ್ಲಿ ವಿದ್ಯಾರ್ಥಿಗಳಿಗೆ ಅತಿಯಾದ ಸಕ್ಕರೆ ಸೇವನೆಯ ಅಪಾಯಗಳ ಬಗ್ಗೆ ಶಿಕ್ಷಣ ನೀಡಲು ಕ್ರಮ ಕೈಗೊಳ್ಳುವುದು.

ಅದರ ಜೊತೆಗೆ ವಿದ್ಯಾರ್ಥಿಗಳು ಮಾಹಿತಿಯುಕ್ತ ಆಹಾರ ಆಯ್ಕೆಗಳನ್ನು ಮಾಡಲು ಮತ್ತು ದೀರ್ಘಕಾಲೀನ ಆರೋಗ್ಯ ಪ್ರಯೋಜನಗಳನ್ನು ಉತ್ತೇಜಿಸಲು ಅನುವು ಮಾಡಿಕೊಡುತ್ತದೆ. ಶಾಲೆಗಳು ಈ ನಿಟ್ಟಿನಲ್ಲಿ ಜಾಗೃತಿ ವಿಚಾರ ಸಂಕಿರಣಗಳು / ಕಾರ್ಯಾಗಾರಗಳನ್ನು ಆಯೋಜಿಸಲು ಈ ಮೂಲಕ ರಾಜ್ಯ ಸರ್ಕಾರ ಸೂಚಿಸಿದೆ.

Leave a Reply

error: Content is protected !!