LOCAL NEWS : ಗಣೇಶ ಚೌತಿ & ಈದ್ ಮಿಲಾದ್ ಹಬ್ಬದ ಶಾಂತಿ ಸಭೆ : ಕಾನೂನಿನ ಚೌಕಟ್ಟಿನಲ್ಲಿ ಹಬ್ಬ ಆಚರಣೆ ಮಾಡಬೇಕು : ಸಿಪಿಐ ಮೌನೇಶ್‌ ಪಾಟೀಲ್‌

You are currently viewing LOCAL NEWS : ಗಣೇಶ ಚೌತಿ & ಈದ್ ಮಿಲಾದ್ ಹಬ್ಬದ ಶಾಂತಿ ಸಭೆ : ಕಾನೂನಿನ ಚೌಕಟ್ಟಿನಲ್ಲಿ ಹಬ್ಬ ಆಚರಣೆ ಮಾಡಬೇಕು : ಸಿಪಿಐ ಮೌನೇಶ್‌ ಪಾಟೀಲ್‌

ಪ್ರಜಾವೀಕ್ಷಣೆ ಸುದ್ದಿ :-

LOCAL NEWS : ಗಣೇಶ ಚೌತಿ & ಈದ್ ಮಿಲಾದ್ ಹಬ್ಬದ ಶಾಂತಿ ಸಭೆ : ಕಾನೂನಿನ ಚೌಕಟ್ಟಿನಲ್ಲಿ ಹಬ್ಬ ಆಚರಣೆ ಮಾಡಬೇಕು : ಸಿಪಿಐ ಮೌನೇಶ್‌ ಪಾಟೀಲ್‌

ಕುಕನೂರು: ‘ಇದೇ ಆಗಷ್ಟ್‌ 27 ರಿಂದ ಗಣೇಶ ಹಬ್ಬ ಆರಂಭವಾಗಲಿದ್ದು, ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿ 9 ಗಂಟೆ ನಂತರ ಧ್ವನಿ ವರ್ದಕಗಳನ್ನು ಬಳಸುವಂತಿಲ್ಲ. ನಿಯಮ ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು, ಕಾನೂನಿನ ಚೌಕಟ್ಟಿನಲ್ಲಿ ಹಬ್ಬಗಳು ಆಚರಣೆ ಮಾಡಬೇಕು’ ಎಂದು ಸಿಪಿಐ ಮೌನೇಶ್‌ ಪಾಟೀಲ್‌ ಹೇಳಿದರು.

ಇಂದು ಸಂಜೆ 5 ಗಂಟೆಗೆ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಅಂಗವಾಗಿ ಹಮ್ಮಿಕೊಂಡಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸುತ್ತಮುತ್ತಲಿನಲ್ಲಿ ಸರಿಸುಮಾರು ನೂರಕ್ಕೂ ಹೆಚ್ಚು ಗಣೇಶ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಅದೇ ರೀತಿ ಸೆ. 04-05 ರಂದು ಮುಸ್ಲಿಮರ ಈದ್ ಮಿಲಾದ್ ಹಬ್ಬವು ಇರುವುದರಿಂದ, ಯಾವುದೇ ರೀತಿ ಕೋಮು ಗಲಭೆಯಾಗದಂತೆ, ಸೌಹಾರ್ದಯುತವಾಗಿ ಈ ಎರಡು ಹಬ್ಬವನ್ನು ಆಚರಣೆ ಮಾಡಬೇಕು ಎಂದು ಪಿಎಸ್‌ಐ ಗುರುರಾಜ್‌ ಟಿ ಹೇಳಿದರು.

ಈ ಸಂದರ್ಭದಲ್ಲಿ ಪೊಲೀಸ್‌ ಎಎಸ್‌ಐಗಳು ಪೊಲೀಸ್‌ ಪದೆಗಳು, ಸುತ್ತಮುತ್ತಲಿನ ಗ್ರಾಮಗಳ ಹಿರಿಯರು, ಗಣೇಶ ಉತ್ಸವ ಸಮೀತಿಯ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

error: Content is protected !!