BREAKING : ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣ ಬೀಗ್ ಟ್ವಿಸ್ಟ್…! : “ನನ್ನ ಮಗಳ ಮೇಲೆ ನಿರಂತರ ಅತ್ಯಾಚಾರ.!!” : ಗಂಭೀರ ಆರೋಪ..!!
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ಕೊಪ್ಪಳ ನಗರದಲ್ಲಿ ಕೆಲ ದಿನಗಳ ಹಿಂದೆ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಮತ್ತು ಸಹೋದರಿಯರು “ನನ್ನ ಮಗಳ ಮೇಲೆ ಅತ್ಯಾಚಾರ ಮಾಡಲಾಗಿದೆ ಮತ್ತು ನನಗೆ ಬೆದರಿಕೆ ಹಾಕಲಾಗಿದೆ ನನ್ನ ಮಗಳಿಗೆ ನ್ಯಾಯ ಕೊಡಿಸಿ” ಎಂದು ಬಾಲಕಿಯ ತಾಯಿ ಮತ್ತು ಸಹೋದರಿಯರು ಧರಣಿ ಕುಳಿತಿದ್ದಾರೆ.
ಈ ಬಗ್ಗೆ ಮಾತನಾಡಿದ ಬಾಲಕಿಯ ತಾಯಿ, “ಬಡವಳಾದ ನನಗೆ ಮೂರು ಹೆಣ್ಣು ಮಕ್ಕಳು. ನನ್ನ ಗಂಡ ತೀರಿಕೊಂಡಿದ್ದು, ನನ್ನ ಕುಟುಂಬಕ್ಕೆ ಯಾರು ಆಧಾರ ಇಲ್ಲದ ಕಾರಣ ನನ್ನ ಮಕ್ಕಳನ್ನು ನಾನೇ ದುಡಿದು ಸಾಕಬೇಕು. ತುಂಬಾ ಕಷ್ಟಪಟ್ಟು ನಾನು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದೇನೆ. ನನ್ನ 16 ವರ್ಷದ ಮಗಳು ಕಂಪ್ಯೂಟರ್ ತರಬೇತಿಗೆ ಹೋಗುವಾಗ ಅವಳ ಹಿಂದೆ ಬಿದ್ದ ಕೊಲೆಯಾದ ಗವಿಸಿದ್ದಪ್ಪ ತನ್ನನ್ನು ಪ್ರೀತಿಸು ಎಂದು ಒತ್ತಾಯಿಸಿ, ನನ್ನ ಮಗಳನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ” ಎಂದು ಬಾಲಕಿಯ ತಾಯಿ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಆತನ ತಂದೆ, ತಾಯಿ ಮತ್ತು ಅಕ್ಕನಿಗೆ ತಿಳಿಸಿದಾಗ ಅವರು “ನಿನ್ನ ಮಗಳೇ ನಮ್ಮ ಹುಡುಗನ ಹತ್ತಿರ ಬರುತ್ತಾಳೆ. ಹಾಗಾಗಿ ನೀನು ಸುಮ್ಮನೆ ಇದ್ದರೆ ಸರಿ. ಇಲ್ಲಾ ಅಂದರೆ ನಿನ್ನನ್ನು ಮತ್ತು ನಿನ್ನ ಮಗಳನ್ನು ಬಿಡುವುದಿಲ್ಲ ಎಂದು ನನಗೆ ಬೆದರಿಕೆ ಹಾಕಿದ ಕಾರಣ ಮತ್ತು ಮರ್ಯಾದೆಗೆ ಅಂಜಿ ಎಲ್ಲವನ್ನೂ ನಾವು ಸಹಿಸಿಕೊಂಡೆವು” ಎಂದು ಬಾಲಕಿಯ ತಾಯಿ ಹೇಳಿದ್ದಾರೆ.
“ನಿನ್ನ ವಿಡಿಯೋ ಇದೆ ಎಂದು ನನ್ನ ಮಗಳಿಗೆ ಬ್ಲಾಕ್ ಮೇಲ್ ಮಾಡುತ್ತಾ, ಗವಿಸಿದ್ದಪ್ಪ ಆಕೆಯ ಮೇಲೆ ಅತ್ಯಾಚಾರ ಮಾಡುತ್ತಾ ಬಂದಿದ್ದ. ಇಷ್ಟೆಲ್ಲಾ ಆದರೂ ಸಹ ಇನ್ನೂ ಅಪ್ರಾಪ್ತಿಯಾದ ನನ್ನ ಮಗಳ ಜೊತೆ ಪ್ರೀತಿ ಹೆಸರಲ್ಲಿ ಮಾಡಿರುವುದು ಅನ್ಯಾಯವೇ ಆಗಿದೆ. ಅಪ್ರಾಪ್ತಳಾದ ನನ್ನ ಮಗಳ ಮೇಲೆ ಆದ ಅತ್ಯಾಚಾರಕ್ಕೆ ನ್ಯಾಯ ಕೊಡಿಸಿ ಮತ್ತು ಈ ಅತ್ಯಾಚಾರಕ್ಕೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ತಾಯಿ ಮತ್ತು ಸಹೋದರಿ ಮನವಿ ಮಾಡಿದ್ದಾರೆ.