LOCAL NEWS : ಗ್ರಾಮೀಣ ಭಾಗದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಸಂಗಮೇಶ ಗುತ್ತಿ
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ‘ಸರ್ಕಾರದ ಅತ್ಯಂತ ಯಶಸ್ವಿ ಯೋಜನೆಗಳಲ್ಲಿ ಒಂದಾದ ಗ್ಯಾರಂಟಿ ಯೋಜನೆಗಳನ್ನು ಗ್ರಾಮೀಣ ಭಾಗದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಎಂದು ಅಧಿಕಾರಿಗಳಿಗೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕುಕನೂರು ತಾಲೂಕ ಅಧ್ಯಕ್ಷ ಸಂಗಮೇಶ ಗುತ್ತಿ ಹೇಳಿದರು.
ತಾಲೂಕಿನ ತಳಕಲ್‌ನಲ್ಲಿ ಆಯೋಜಿಸಿದ್ದ “ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಪ್ರತಿಯೊಬ್ಬ ಅಧಿಕಾರಿಗಳು ಹಾಗೂ ಅನುಷ್ಠಾನ ಸಮಿತಿ ಸದಸ್ಯರ ಕರ್ತವ್ಯವಾಗಿದ್ದು, ಪ್ರತಿಯೊಬ್ಬ ಪ್ರಜೆಗಳಿಗೂ ಇದರ ಸೌಲಭ್ಯ ದೊರೆಯುವಲ್ಲಿ ಕ್ರಮ ಕೈಗೊಳ್ಳಿ ಎಂದು ಸಂಗಮೇಶ ಗುತ್ತಿ ಕರೆ ನೀಡಿದರು.
‘ಸ್ಥಳೀಯವಾಗಿ ಸಮಸೆಗಳ ಇತ್ಯರ್ಥಕ್ಕೆ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ ಎಂಬ ಘೋಷ ವಾಕ್ಯದೊಂದಿಗೆ ಅನುಷ್ಠಾನ ಸಮಿತಿ ಗ್ರಾಮ ಪಂಚಾಯತಿ ಕಡೆ ಗಮನಹರಿಸುತ್ತಿದ್ದು, ಇದರ ಯಶಸ್ವಿಗೆ ಪ್ರತಿಯೊಬ್ಬರು ಕೈಜೋಡಿಸಿ ಎಂದು ಹೇಳಿದರು.
ಈ ವೇಳೆಯಲ್ಲಿ ಕುಕನೂರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಜರುಗಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ನಿಖರ ಅಂಕಿ ಅಂಶಗಳನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಯಲಬುರ್ಗಾ ತಾಲೂಕ ಅಧ್ಯಕ್ಷ ಸುದೀರ ಕುರ್ಲಹಳ್ಳಿ ಸಂಪೂರ್ಣ ವಿವರಣೆಯನ್ನು ನೀಡಿದರು.
ಈ ಸಭೆಯಲ್ಲಿ ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ ಹಾಗೂ ಶಕ್ತಿ ಯೋಜನೆಯ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಾಯಿತು.
ಈ ವೇಳೆ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಅನುಷ್ಠಾನ ಸಮಿತಿ ಸದಸ್ಯರು ಮಾತನಾಡುತ್ತಾ ‘ಸಾರಿಗೆ ಸಂಸ್ಥೆಯವರು ಸೂಕ್ತ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬಸ್ಸಿನ ಸೌಲಭ್ಯ ಕಲ್ಪಿಸದೆ ಇರೋದಕ್ಕೆ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ ಕುಕನೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಟಿಕೇಟ್ ಮುಂಗಡ ಕಾಯ್ದಿರಿಸುವಿಕೆ ಸಂಬಂಧಿಸಿದಂತೆ ಕಾರ್ಯಾಲಯ ಉದ್ಘಾಟನೆಗೆ ಸ್ಥಳಾವಕಾಶ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಉತ್ತರಿಸಿದ ಸಾರಿಗೆ ಸಂಸ್ಥೆಯ ಅಧಿಕಾರಿ ಇದಕ್ಕೆ ಸಂಬಂಧಪಟ್ಟಂತೆ ಮೇಲಾಧಿಕಾರಿಗಳಿಂದ ಯಾವುದೇ ಆದೇಶ ಬಂದಿಲ್ಲ ಎಂದು ಹೇಳುತ್ತಿದ್ದಂತೆಯೇ ಅನುಷ್ಠಾನ ಸಮಿತಿ ಕುಕನೂರು ತಾಲೂಕಾಧ್ಯಕ್ಷ ಸಂಗಮೇಶ ಗುತ್ತಿ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಮೇಲೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸರಿಯಾಗಿ ಕರ್ತವ್ಯ ನಿರ್ವಹಿಸಿ ಎಂದು ಹೇಳುತ್ತಾ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆಯಲ್ಲ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಯಲಬುರ್ಗಾ ತಾಲೂಕ ಅಧ್ಯಕ್ಷ ಸುಧೀರ್ ಕೂರ್ಲಹಳ್ಳಿ, ಜಿಲ್ಲಾ ಸಮಿತಿ ಸದಸ್ಯ ಮಲ್ಲಿಕಾರ್ಜುನ ಜಕಲಿ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಪಾಟೀಲ್ ಬಿರಾದರ, ಶಿಶು ಅಭಿವೃದ್ಧಿ ಅಧಿಕಾರಿ ಬೆಟ್ಟದಪ್ಪ ಮಾಳೆಕೊಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷೆ ಜಾಹೀರಾ ಬೇಗಮ್, ಉಪಾಧ್ಯಕ್ಷೆ ಜಾಹಿರಾ ಬೇಗo, ಗ್ರಾಮ ಪಂಚಾಯತಿ ಸದಸ್ಯರು, ಅಭಿವೃದ್ಧಿ ಅಧಿಕಾರಿ ವೀರನಗೌಡ, ಇಂಜಿನಿಯರ್ ಕಾಲೇಜ್ ಹೆಚ್ ಒ ಡಿ ಬಸವರಾಜ, ಪ್ರಮುಖರಾದ ಉಮೇಶ್ ಗೌಡ ಪೊಲೀಸ್ ಪಾಟೀಲ್, ತಿಪ್ಪಣ್ಣ ಚೌಡ್ಕಿ, ಗ್ಯಾರೆಂಟಿ ಯೋಜನೆಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇನ್ನಿತರರು ಪಾಲ್ಗೊಂಡಿದ್ದರು.