BIG NEWS : ರಾಜ್ಯದ ಕಾರ್ಮಿಕರಿಗೆ ಹಾಗೂ ಜನತೆಗೆ ಗುಡ್ ನ್ಯೂಸ್..!!
ಬೆಂಗಳೂರು : ರಾಜ್ಯದ ಕಾರ್ಮಿಕರಿಗೆ ಹಾಗೂ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಬಳಗೇರಿ ಗ್ರಾಮ ಪಂಚಾಯತಿ ವತಿಯಿಂದ ಸಮಸ್ತ ನಾಡಿನ ಜನತೆಗೆ 79ನೇ ಸ್ವಾತಂತ್ರ್ಯ ದಿನಾಚರಣೆ, ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಜಯಂತಿ ಮತ್ತು ಗಣೇಶ ಚತುರ್ಥೀ ಹಬ್ಬದ ಶುಭಾಶಯಗಳು
ಹೌದು, ಈ ಕುರಿತು “X” ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ನಮ್ಮ ಸರ್ಕಾರವು 31 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ. ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಆಗದಂತೆ ಪಾರದರ್ಶಕವಾಗಿ ಶಾಲೆಗಳ ನಿರ್ಮಾಣ ಮಾಡಲಾಗುವುದು. ಇದರಿಂದ ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಜೊತೆಗೆ ವಸತಿನಿಲಯದ ಅನುಕೂಲವು ಸಿಗಲಿದೆ’ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದ್ದಾರೆ.