ಪ್ರಜಾ ವೀಕ್ಷಣೆ ಸುದ್ದಿ :
LOCAL NEWS : ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಎಲ್ಲ ಮಹನೀಯರ, ತ್ಯಾಗ ಬಲಿದಾನವನ್ನು ಸ್ಮರಿಸಿ : ಸಂತೋಷ ಬಿರಾದರ್ ಪಾಟೀಲ್
ಕುಕನೂರ : ‘ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಹೋರಾಟಗಾರರ ತ್ಯಾಗ ಬಲಿದಾನವನ್ನು ಎಲ್ಲ ಪ್ರಜೆಗಳು ನೆನೆಯಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದರ್ ಪಾಟೀಲ್ ಹೇಳಿದರು.
ಕುಕನೂರ ತಾಲೂಕು ಪಂಚಾಯತಿ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕಾರ್ಯನಿರ್ವಾಹಕ ಅಧಿಕಾರಿಗಳು ಮಾತನಾಡಿ ನಮ್ಮ ಭಾರತ ದೇಶ ಸುಲಭವಾಗಿ ಸ್ವಾತಂತ್ರ್ಯ ಪಡೆಯಲಿಲ್ಲ. ಅನೇಕ ಹೋರಾಟಗಾರರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ದೊರಕಿದೆ.
ವೀರಯೋಧರು ಹಾಗೂ ಹೋರಾಟಗಾರರನ್ನು ಸದಾಕಾಲ ಸ್ಮರಿಸಬೇಕು. ದೇಶ ನಮಗೇನು ನೀಡಿದೆ ಅನ್ನೋದಕ್ಕಿಂತ ದೇಶಕ್ಕೆ ನಾವು ಏನು ನೀಡಿದ್ದೇವೆ ಎಂಬುದು ಮುಖ್ಯ ಆಗುತ್ತದೆ. ಪ್ರತಿಯೊಬ್ಬರೂ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ದೇಶದ ಏಳ್ಗೆಗೆ ಶ್ರಮಿಸಬೇಕು ಎಂದರು. ಅಲ್ಲದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸರಿಯಾಗಿ ಬಳಸಿಕೋಳ್ಳಬೇಕು ಎಂದರು.
ನಂತರ ತಾಲೂಕ ಪಂಚಾಯತಿ ಕಛೇರಿಯಲ್ಲಿ ವೀರ ಸಂಗೋಳ್ಳಿ ರಾಯಣ್ಣ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ತಾಲೂಕ ಯೋಜನಾಧಿಕಾರಿಗಳು, ತಾಲೂಕು ಪಂಚಾಯತಿ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.

