BIG BREAKING : ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆ ವಿರೋಧಿಸಿ ಬಿಜೆಪಿ ನಾಯಕರ ನಿಯೋಗ ಧರ್ಮಸ್ಥಳಕ್ಕೆ ಭೇಟಿ..!
ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತ್ತಿಟ್ಟ ಪ್ರಕರಣದ ಹಿನ್ನೆಲೆ ಎಸ್‌ಐಟಿ ತನಿಖೆ ಮಾಡಲಾಗುತ್ತಿದ್ದು, ಈ ಕುರಿತು ಬಿಜೆಪಿ ನಾಯಕರು ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ಇಂದು ಧರ್ಮಸ್ಥಳಕ್ಕೆ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಭೇಟಿ ನೀಡಿದ್ದು, ಬಳಿಕ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಶ್ರೀಮಂಜುನಾಥನ ದರ್ಶನದ ನಂತರ ವೀರೇಂದ್ರ ಹೆಗ್ಗಡೆ ನಿವಾಸದಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಸದ ಬ್ರಿಜೇಶ್ ಚೌಟ, ಶಾಸಕ ಎಸ್.ಆರ್. ವಿಶ್ವನಾಥ್, ಎಂಎಲ್ ಸಿ ಸಿ.ಟಿ.ರವಿ ಸೇರಿ ಹಲವರು ಭೇಟಿ ನೀಡಿದ್ದಾರೆ. ಈ ವೇಳೆ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದಿದ್ದಾರೆ.