BREAKING NEWS : ಒಳ ಮೀಸಲಾತಿ  ಜಾರಿ ಕುರಿತು ನಾಳೆ ಮಹತ್ವದ ಸಚಿವ ಸಂಪುಟ ಸಭೆ..!

You are currently viewing BREAKING NEWS : ಒಳ ಮೀಸಲಾತಿ  ಜಾರಿ ಕುರಿತು ನಾಳೆ ಮಹತ್ವದ ಸಚಿವ ಸಂಪುಟ ಸಭೆ..!

BREAKING NEWS : ಒಳ ಮೀಸಲಾತಿ  ಜಾರಿ ಕುರಿತು ನಾಳೆ ಮಹತ್ವದ ಸಚಿವ ಸಂಪುಟ ಸಭೆ..!

 

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌ : ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಾಳೆ (ಆಗಸ್ಟ್ 19 ರ) ಸಂಜೆ 5 ಗಂಟೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.

ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 19-08-2025ರ ಮಂಗಳವಾರ ಸಂಜೆ 5 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನ್ಯಾ. ನಾಗಮೋಹನದಾಸ್ ಸಮಿತಿ ವರದಿ ಬಂದಿದ್ದು, ನಾಳೆ (ಆಗಸ್ಟ್ 19 ರಂದು ಮಂಗಳವಾರ) ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

Leave a Reply

error: Content is protected !!