BREAKING : ಹಠಾತ್ ಹೃದಯಾಘಾತ ಪ್ರಕರಣ :ರಾಜ್ಯದ ಎಲ್ಲ ತಾಲೂಕು & ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿ ‘ಟೆಲಿ ಇಸಿಜಿ’ ವ್ಯವಸ್ಥೆ!

You are currently viewing BREAKING : ಹಠಾತ್ ಹೃದಯಾಘಾತ ಪ್ರಕರಣ :ರಾಜ್ಯದ ಎಲ್ಲ ತಾಲೂಕು & ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿ ‘ಟೆಲಿ ಇಸಿಜಿ’ ವ್ಯವಸ್ಥೆ!

BREAKING NEWS : ಹಠಾತ್ ಹೃದಯಾಘಾತ ಪ್ರಕರಣ :ರಾಜ್ಯದ ಎಲ್ಲ ತಾಲೂಕು & ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿ ‘ಟೆಲಿ ಇಸಿಜಿ’ ವ್ಯವಸ್ಥೆ!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌ : ರಾಜ್ಯದಲ್ಲಿ ಹಠಾತ್ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ‘ಟೆಲಿ ಇಸಿಜಿ ವ್ಯವಸ್ಥೆ’ ಕಲ್ಪಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಿನ್ನೆ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ, ‘ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ “ಟೆಲಿ ಇಸಿಜಿ ವ್ಯವಸ್ಥೆ”ಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು.

 

“ಟೆಲಿ ಇ.ಸಿ.ಜಿ” ಮೂಲಕ ತಜ್ಞವೈದ್ಯರಿಂದ ಅಗತ್ಯ ಮಾರ್ಗದರ್ಶನ ದೊರೆಯಲಿದೆ. ಹಠಾತ್ ಹೃದಯಘಾತಗಳನ್ನ ಪ್ರಿವೆಂಟ್ ಮಾಡಲು ಅವಕಾಶವಿದ್ದು, ಆರಂಭದಲ್ಲೇ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ಹಚ್ಚುವತ್ತ ಪತ್ತೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಟೆಲಿ ಇಸಿಜಿ ಸಹಕಾರಿಯಾಗಲಿದೆ. “ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ”ಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹೃದಯ ಜ್ಯೋತಿ ಯೋಜನೆ ಇಂದು ಸಾವಿರಾರು ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ “ಹೃದಯಜ್ಯೋತಿ ಯೋಜನೆ”ಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ಮಾಹಿತಿ ನೀಡಿದರು.

Leave a Reply

error: Content is protected !!