LOCAL NEWS: “ಆ.28 ರಂದು ಕಿನ್ನಾಳನಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”

ಆ.28 ರಂದು ಕಿನ್ನಾಳನಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ : ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಗಸ್ಟ್ 28 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

 ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸುವರು.

ಸಭೆಯಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೇ ಖುದ್ದಾಗಿ ಸಭೆಗೆ ಹಾಜರಾಗುವಂತೆ ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!