Post Views: 116
“ಕೊಪ್ಪಳ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸದ್ಭಾವನ ದಿನಾಚರಣೆ”

ಕೊಪ್ಪಳ : ಕೊಪ್ಪಳ ನಗರದ ಎನ್.ಜಿ.ಓ ಕಾಲೋನಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಬುಧವಾರ ಸದ್ಭಾವನಾ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ಅವರು ಮಾತನಾಡಿ ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಪ್ರತಿ ವರ್ಷ ಆಗಸ್ಟ್, 20ರಂದು ಸದ್ಭಾವನಾ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ನಾಗರಾಜ ನಾಯಕ ಡೊಳ್ಳಿನ ಅವರು ಓದಿಸಿದರು. ಈ ಸಂಧರ್ಭದಲ್ಲಿ ಗ್ರಂಥಾಲಯ ಸಿಬ್ಬಂದಿಗಳಾದ ಉಮಾ ಹಳ್ಯಾಳ, ಕೊಟ್ರಪ್ಪ ಬಿ. ವಿಜಯಲಕ್ಷ್ಮೀ ವಡ್ಡಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.