BREAKING : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನದ ಆದೇಶ..!

You are currently viewing BREAKING : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನದ ಆದೇಶ..!

BREAKING : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನದ ಆದೇಶ..!

 

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌ (ಉಡುಪಿ) : ಬಿಜೆಪಿ ಹಿರಿಯ ಮುಖಂಡ ಹಾಗೂ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಇಂದು ಬಂಧಿಸಲಾಗಿತ್ತು.

ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ, ಉಡುಪಿಯ ಬ್ರಹ್ಮಾವರ ತಾಲ್ಲೂಕಿನ ಸಂಚಾರಿ ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಅದೇ ರೀತಿ ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಆಗಸ್ಟ್.23ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!