FLASH NEWS : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ..ಬೇಲಾ..? : ಇಂದು ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ..!
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ಬಿಜೆಪಿ ಹಿರಿಯ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿಯಲ್ಲಿ ಹಿಂದೂ ಪರ ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧನ ಮಾಡಲಾಗಿತ್ತು.
ಉಡುಪಿಯ ಕೋರ್ಟ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಸಬ್ ಜೈಲಿನಲ್ಲಿರುವ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಕೋರ್ಟ್ ಆದೇಶದ ಹಿನ್ನೆಲೆ ಮಹೇಶ್ ತಿಮರೋಡಿ ಈಗ ಹಿರಿಯಡ್ಕ ಸಬ್ ಜೈಲು ನಲ್ಲಿದ್ದಾರೆ. ಇಂದು ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಲಿದೆ. ಬಳಿಕ ಅವರಿಗೆ ಮತ್ತೆ ಜೈಲು ಸೆರೆವಾಸ ಆಗಲಿದೆಯಾ? ಅಥವಾ ಬೇಲಾಗುತ್ತಾ? ಎಂದು ಕಾದು ನೋಡಬೇಕಾಗಿದೆ.